ಇತ್ತೀಚಿನ ಸುದ್ದಿ

ಅಂಕುಶದೊಡ್ಡಿ ಗ್ರಾಮದಲ್ಲಿ ಮೇ 2ರಂದು ಜಗದ್ಗುರು ಅಡ್ಡ ಪಲ್ಲಕ್ಕಿ ಮಹೋತ್ಸವ

ಮಸ್ಕಿ: ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಬೃಹನ್ಮಠ ಆವರಣದಲ್ಲಿ 21ನೇ ವರ್ಷದ ಪಟ್ಟಾಧಿಕಾರ ವರ್ಧಂತಿ ಮಹೋತ್ಸವ ಹಾಗೂ ಜಗದ್ಗುರು ಅಡ್ಡ ಪಲ್ಲಕ್ಕಿ ಮಹೋತ್ಸವ ಮೇ.2ರಂದು ನಡೆಯಲಿದೆ ಎಂದು ಗ್ರಾಮದ ಬೃಹನ್ಮಠದ ವಾಮದೇವ ಶಿವಾಚಾರ್ಯ ಸ್ವಾಮೀಜಿ ಅವರು ತಿಳಿಸಿದರು.
ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ನೀಡಿರುವ ಅವರು, ಅಂದಿನ ದಿನ ಬೆಳಿಗ್ಗೆ ಕಾಶಿ ಜಗದ್ಗುರು ಗ್ರಾಮ ಪ್ರವೇಶ ಹಾಗೂ ಅಡ್ಡ ಪಲ್ಲಕ್ಕಿ ಮಹೋತ್ಸವ, ಮತ್ತು ಬೆಳಿಗ್ಗೆ 10ಗಂಟೆಗೆ 108 ಕುಂಬ ಮಹೋತ್ಸವ ಸಕಲ ವಾಧ್ಯ ಮೇಳದೊಂದಿಗೆ ಮೆರವಣಿಗೆ ಮಾಡಲಾಗುವುದು.ನಂತರ ಕತೃ ಗದ್ದುಗೆಗೆ ಹಾಗೂ ಮಲ್ಲಿಕಾರ್ಜುನ ಸ್ವಾಮೀಜಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ನಂತರ ನಡೆಯುವ ಧರ್ಮಸಭೆಯಲ್ಲಿ ಬಿಚ್ಚಾಲಿ ಬಳಗಾನೂರಿನ ಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ನಂದವಾಡಗಿ ಹಿರೇಮಠದ ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿ, ದೇವದುರ್ಗ ನೀಲಗಲ್ಲ ಬೃಹನ್ಮಠ ಪಂಚಾಕ್ಷರಿ ಶಿವಾಚಾರ್ಯ ಮಹಾಸ್ವಾಮಿ, ರಾಯಚೂರು ಕಿಲ್ಲೆ ಭ್ರಹನ್ಮಠ ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿ, ರಾಯಚೂರಿನ ಸೋಮವಾರಪೇಟೆ ಹಿರೇಮಠದ ಅಭಿನವ ರಾಯಚೂಟಿ ವೀರ ಶಿವಾಚಾರ್ಯ ಮಹಾಸ್ವಾಮೀಜಿ, ಗಬ್ಬೂರು ಸಂಸ್ಥಾನಮಠದ ಬೂದಿ ಬಸವೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ, ಗುರುಗುಂಟಾ ಚರಮೂರ್ತಿಮಠ ಸದಾನಂದ ಶಿವಾಚಾರ್ಯ ಮಹಾಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಹಾಗೂ ವೈದ್ಯಕೀಯ ಸಚಿವ ಹಾಗೂ ರಾಯಚೂರು ಜಿಲ್ಲಾ ಉಸ್ತಾವರಿ ಸಚಿವ ಶರಣಬಸವ ಪ್ರಕಾಶ ಪಾಟೀಲ, ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜ್, ಸಂಸದ ರಾಜಶೇಖರ ಹಿಟ್ನಾಳ, ಶಾಸಕ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಆರ್.ಬಸನಗೌಡ ತುರವಿಹಾಳ ಸೇರಿದಂತೆ ಶಾಸಕರು ಮಾಜಿ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಮುಖಂಡರು ಹಾಗೂ ಕಾಶಿ ಜಗದ್ಗುರು ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

ಪೋಟೋ ಶೀರ್ಷಿಕೆ 20ಎಂಎಸ್ ಕೆ2 ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಬೃಹನ್ಮಠದ ವಾಮದೇವ ಶಿವಾಚಾರ್ಯ ಸ್ವಾಮೀಜಿ ಅವರ ಚಿತ್ರ.

Related Articles

Leave a Reply

Your email address will not be published. Required fields are marked *

Back to top button