IPL 2025: 35 ಎಸೆತಗಳಲ್ಲಿ ಶತಕ ಚಚ್ಚಿ ಮಹಾ ದಾಖಲೆ ಬರೆದ ಕೇವಲ14 ವರ್ಷದ ಬಾಲಕ ವೈಭವ್ ಸೂರ್ಯವಂಶಿ!

ಜೈಪುರ್ : ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ನ 47ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಸೋತ ಗುಜರಾತ್ ಟೈಟನ್ಸ್ ಮೊದಲು ಬ್ಯಾಟಿಂಗ್ ಮಾಡಿ ಶುಭ್‌ಮನ್ ಗಿಲ್ ಹಾಗೂ ಜೋಸ್ ಬಟ್ಲರ್ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 209 ರನ್ ಕಲೆಹಾಕಿದ್ದು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 210 ರನ್‌ಗಳನ ಗುರಿಯನ್ನು ನೀಡಿದೆ.
ಗುಜ್ರಾತ್ ತಂಡದ ದಿಗ್ಗಜ ಬೌಲರುಗಳ ಬೆವರಿಳಿಸಿದ ವೈಭವ್ ಸೂರ್ಯವಂಶಿ
ಈ ಗುರಿಯನ್ನು ಬೆನ್ನಟ್ಟಿರುವ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಕಣಕ್ಕಿಳಿದಿದ್ದಾರೆ. ಇಬ್ಬರೂ ಸಹ ಅಬ್ಬರದ ಆರಂಭ ಮಾಡಿದ್ದು, ಬೌಂಡರಿಗಳ ಸುರಿಮಳೆಗೈದಿದ್ದಾರೆ. ಅದರಲ್ಲೂ ವೈಭವ್ ಸೂರ್ಯವಂಶಿ 35 ಎಸೆತಗಳಲ್ಲಿ 7 ಬೌಂಡರಿ ಹಾಗೂ 11 ಸಿಕ್ಸರ್ ಸಹಿತ 100 ರನ್ ಬಾರಿಸಿದರು. ಅಂತಿಮವಾಗಿ 38 ಎಸೆತಗಳಲ್ಲಿ 101 ರನ್ ಬಾರಿಸಿ ಔಟ್ ಆದರು.
ವರದಿ : ಮೊಹಮ್ಮದ್ ಶಫಿ ಸ್ಪೋರ್ಟ್ಸ್ ಬ್ಯೂರೋ tv8kannada ಬೆಂಗಳೂರು