ಇತ್ತೀಚಿನ ಸುದ್ದಿ

ರಾಯಚೂರು: ಡಿ.ಸಿ.‌ ಕಚೇರಿಗೆ ಬಾಂಬ್ ಬೆದರಿಕೆ; ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ

ರಾಯಚೂರಿನ ಹೊರವಲಯದ ಎಕ್ಲಾಸಪೂರು‌ ಬಡಾವಣೆಯಲ್ಲಿ ‌ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿಗೆ ಈಮೇಲ್ ಬಂದಿದ್ದು ಸಿಬ್ಬಂದಿಗಳು ಹೌಹಾರಿ ಕಚೇರಿಯಿಂದ ಹೊರಗೆ ಬಂದಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಯವರಿಗೆ ಈಮೇಲ್ ಸಂದೇಶ ಬಂದಿದ್ದು ಮಾಹಿತಿ ಪಡೆಯುತ್ತಿದ್ದಂತೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಕಚೇರಿಯಿಂದ ಓಡಿ ಹೊರಬಂದರು.

ಮಾಹಿತಿ ಪಡೆಯುತ್ತಿದ್ದಂತೆ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೇಸಿಗೆ ಹಿನ್ನೆಲೆಯಲ್ಲಿ ಬೆಳಿಗ್ಗೆ 8 ರಿಂದ 1 ಗಂಟೆಯವರೆಗೆ ಸರ್ಕಾರಿ ಕಚೇರಿಗಳ ಸಮಯ ನಿಗದಿ ಮಾಡಿದ್ದರಿಂದ ಸ್ವಲ್ಪ ಮುಂಚಿತವಾಗಿಯೇ ಸಿಬ್ಬಂದಿಯನ್ನು ಮನೆಗೆ ಕಳುಹಿಸಿದ್ದಾರೆ.

ಈಮೇಲ್ ಬಂದಿರುವುದನ್ನು ಎಸ್ ಪಿ ಎಂ.ಪುಟ್ಟಮಾದಯ್ಯ ಖಚಿತಪಡಿಸಿದ್ದು, ಪೊಲೀಸ್ ತಂಡದೊಂದಿಗೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ.

ವರದಿ : ವಿಶ್ವನಾಥ್ ಸಾಹುಕಾರ್ tv8kannada ರಾಯಚೂರು

Related Articles

Leave a Reply

Your email address will not be published. Required fields are marked *

Back to top button