ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಸೇನಾ ಯಶಸ್ವಿ ಕಾರ್ಯಚರಣೆ. ಮಸ್ಕಿಯ ಮಲ್ಲಿಕಾರ್ಜುನ ದೇವರಿಗೆ ವಿಶೇಷ ಪೂಜೆ.

ಮಸ್ಕಿ : ಕಾಶ್ಮೀರದ ಪಹಲ್ಯಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ, 07.05.2025ರಂದು ಮುಂಜಾನೆ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ.
ಆದ್ದರಿಂದ ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಮಾನ್ಯ ಶ್ರೀ ರಾಮಲಿಂಗಾರೆಡ್ಡಿ ರವರು ಭಾರತೀಯ ಸೇನೆಯ ಕಾರ್ಯಾಚರಣೆಗೆ ಶುಭಾಶಯವನ್ನು ಸಲ್ಲಿಸಿರುತ್ತಾರೆ.

ನಮ್ಮ ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಮಾನ್ಯ ಸಚಿವರ ಸೂಚನೆಯ ಮೇರೆಗೆ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತಾ, ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಿ ಕರುಣಿಸಲಿ ಎಂದು ಪ್ರಾರ್ಥಿಸಿ ವಿಶೇಷ ಸಂಕಲ್ಪದೊಂದಿಗೆ ಪೂಜೆಗಳನ್ನು ನೆರವೇರಿಸಲು ಕ್ರಮ ಕೈಗೊಳ್ಳಲು ಈ ಮೂಲಕ ಆದೇಶಿಸಿದೆ ಹಿನ್ನೆಲೆಯಲ್ಲಿ ಇಂದು ಮಸ್ಕಿ ಪಟ್ಟಣದ ಐತಿಹಾಸಿಕ ಮಲ್ಲಿಕಾರ್ಜುನ ದೇವರಿಗೆ ಅರ್ಚಕರದಾ ಸಿದ್ದಯ್ಯ ಹೆಸರೂರು ಹಿರೇಮಠ ರವರ ನೇತೃತ್ವದಲ್ಲಿ ವಿಶೇಷ ಸಂಕಲ್ಪದೊಂದಿಗೆ ಪೂಜಾ ಕಾರ್ಯಕ್ರಮ ನಡೆಯಿತು.
ಈ ವೇಳೆ, ಶರಣು. ಸೊಪ್ಪಿಮಠ, ದೊಡಬಸವ ಹಿರೇಮಠ,ಶರಣಬಸವ ಸೊಪ್ಪಿಮಠ,ಸೇರಿದಂತೆ ಇತರೆ ಅರ್ಚಕರ ಬಳಗದವರು ಇದ್ದರೂ.