ರಾಜ್ಯ

ಅಪರೇಷನ್ ಸಿಂಧೂರ ಯಶ್ವಸಿ ಚಾಮರಾಜೇಶ್ವರ ಸ್ವಾಮಿಗೆ ವಿಶೇಷಪೂಜೆ

ಚಾಮರಾಜನಗರ: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಅಪರೇಷನ್ ಸಿಂಧೂರ ಯಶ್ವಸಿಯಾದ ಹಿನ್ನಲೆಯಲ್ಲಿ  ಬಿಜೆಪಿ ನಗರ ಮಂಡಲ  ವತಿಯಿಂದ  ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವೀರಯೋಧರು, ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಆರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

  ಭಾರತಾಂಬೆ, ಭಾರತೀಯ ಸೈನಿಕರು, ಮೋದಿ ಪರ ಜೈಕಾರ ಕೂಗಿ ಸಂಭ್ರಮಿಸಿದರು.

   ನೇತೃತ್ವ ವಹಿಸಿದ್ದ ನಗರ ಮಂಡಲ ಅಧ್ಯಕ್ಷ ಶಿವರಾಜ್   ಮಾತನಾಡಿ, ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಅಪರೇಷನ್ ಸಿಂಧೂರ ಯಶ್ವಸಿಯಾದ ಹಿನ್ನಲೆಯಲ್ಲಿ  ಬಿಜೆಪಿ ನಗರ ಮಂಡಲ  ವತಿಯಿಂದ  ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವೀರಯೋಧರು, ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಆರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಿ, ಅವರಿಗೆ ಹೆಚ್ಚಿನ ಆರೋಗ್ಯ, ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸಲಾಗಿದೆ ಎಂದರು.
  “ಪಾಕಿಸ್ತಾನಿ ಉಗ್ರರು ಪಹಲ್ಗಾಮ್ನಲ್ಲಿ 26 ಮಂದಿಯನ್ನು ಹತ್ಯೆ ಮಾಡಿದ್ದಕ್ಕೆ ಇಂದು ಪ್ರತೀಕಾರ ತೀರಿಸಲಾಗಿದೆ. ಉಗ್ರರ ದಾಳಿ ಪದೇ ಪದೆ ಆಗುತ್ತಿದೆ. ಇದಕ್ಕೆ ಶಾಶ್ವತವಾಗಿ ಕಡಿವಾಣ ಹಾಕುವ ನಿಟ್ಟಿನಲ್ಲಿ ಒಂದೇ ಬಾರಿ ಎಲ್ಲಾ ಉಗ್ರರನ್ನು ನಿರ್ನಾಮ ಮಾಡಬೇಕು‌” ಎಂದು ಆಗ್ರಹಿಸಿದರು.
   ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ನಾವು ಅಭಿನಂದನೆ ಸಲ್ಲಿಸುತ್ತೇವೆ. ಪ್ರತಿ ಬಾರಿ ಉಗ್ರರ ದಾಳಿ ಆದಾಗಲೂ ನಮ್ಮ‌ ಭಾರತೀಯ ಸೇನೆ ಅವರಿಗೆ ತಕ್ಕ ಉತ್ತರ ಕೊಟ್ಟಿದೆ. ಉಗ್ರರನ್ನು ಸಂಹಾರ ಮಾಡಿದ, ನಮ್ಮ ಸೈನಿಕರಿಗೆ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ನಾವು ಈ ಅಭಿನಂದನೆ ಸಲ್ಲಿಸುತ್ತೇವೆ ಎಂದರು.

  ಈ ಸಂದರ್ಭದಲ್ಲಿ ನಗರಸಭಾ ಉಪಾಧ್ಯಕ್ಷೆ ಮಮತ‌ ಬಾಲಸುಬ್ರಹ್ಮಣ್ಯ, ಜಿಲ್ಲಾ ಉಪಾಧ್ಯಕ್ಷ ಶಿವುವಿರಾಟ್, ನಗರದ ಮಂಡಲ  ಪ್ರಧಾನ ಕಾರ್ಯದರ್ಶಿಗಳಾದ ಕೂಸಣ್ಣ , ಮಹೇಶ್, ಉಪಾಧ್ಯಕ್ಷೆ ಕುಮುದಕೇಶವಮೂರ್ತಿ, ರುದ್ರ, ಭಾಸ್ಕರ್,  ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷ ಚಂದ್ರಶೇಖರ, ಉಪಾಧ್ಯಕ್ಷ ಬುಲೆಟ್ ಚಂದ್ರು, ಯವ ಮೋರ್ಚಾ ಅಧ್ಯಕ್ಷ ಸೂರ್ಯಕುಮಾರ್, ಪ್ರಧಾನ ಆನಂದ ಭಗಿರಥ,  ನಗರಸಭಾ ಮಾಜಿ ಸದಸ್ಯ ಶಿವಣ್ಣ, ಮುಖಂಡರಾದ ವೀರೇಂದ್ರ, ಬಂಗಾರನಾಯಕ  ಚಂದ್ರಶೇಖರ, ಉತ್ತವಳ್ಳಿ ಮಹೇಶ್, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಮಲೆಯೂರು ಕಮಲಮ್ಮ ಪ್ರಧಾನ ಕಾರ್ಯದರ್ಶಿ ಎಂ.ಶೈಲಾ, ವನಜಾಕ್ಷಿ, ಜ್ಯೋತಿ, ಜಯಶ್ರೀ,ಪಾರ್ವತಿ,ಗಾಯಿತ್ರಿ,ರಾಜಮ್ಮ ಇತರರು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button