ಇತ್ತೀಚಿನ ಸುದ್ದಿ

ಮಸ್ಕಿ ಪಟ್ಟಣಕ್ಕೆ ಅಲ್ಪಸಂಖ್ಯಾತರ ವಸತಿ ಶಾಲೆ ಮಂಜೂರ ಶಾಸಕರಿಗೆ ಧನ್ಯವಾದ ತಿಳಿಸಿದ್ದ ಮಹಿಬೂಬು ಹಣಿಗಿ

ಮಸ್ಕಿ : ಬಡ ಹಾಗೂ ದೀನ ದಲಿತರ ಅಲ್ಪಸಂಖ್ಯಾತರ ಹಿಂದುಳಿದ ಕಾರ್ಮಿಕರ ಮಕ್ಕಳಿಗೆ ಅತ್ಯುತ್ತಮವಾದ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಸದುದೇಶದಿಂದ ಶಿಕ್ಷಣಕ್ಕಾಗಿ
ರಾಜ್ಯ ಕಾಂಗ್ರೆಸ್ ಸರ್ಕಾರ
ಅನೇಕ ಯೋಜನೆಗಳನ್ನು ರೂಪಿಸಿದ್ದು ವಿಶೇಷವಾಗಿ ಮಸ್ಕಿ ಪಟ್ಟಣಕ್ಕೆ ಕಾಂಗ್ರೆಸ್ ಸರ್ಕಾರ

2025 -26 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಮಂಜೂರು ಮಾಡಿದೆ ಮಸ್ಕಿ ಕ್ಷೇತ್ರದ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಮಹಿಬೂಬು ಹಣಿಗಿ ರವರು
ಮನವಿ ಮಾಡಿದ್ದಾರೆ.

ಈಗಾಗಲೇ ಅಲ್ಪಸಂಖ್ಯಾತರ ವಸತಿ ಶಾಲೆಯನ್ನು ಮಂಜೂರು ಮಾಡಿದ್ದು ಅದಕ್ಕೆ ಬೇಕಾದ ಅಗತ್ಯ ಸಿಬ್ಬಂದಿಗಳನ್ನು ಸಹ ಸರ್ಕಾರ ನೇಮಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಅಲ್ಪಸಂಖ್ಯಾತರ ಇಲಾಖೆಯ ಸಚಿವರು,ಹಾಗೂ ಶಾಸಕ ಬಸವನಗೌಡ ತುರುವಿಹಾಳ ರವರು
ಮಸ್ಕಿ ಕ್ಷೇತ್ರದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಶಿಕ್ಷಣಕ್ಕೆ ವಿಶೇಷ ಒತ್ತು ನೀಡುವ ಮೂಲಕ ವಸತಿ ಶಾಲೆಯನ್ನು ಮಂಜೂರು ಮಾಡಿರುವುದಕ್ಕೆ ಕ್ಷೇತ್ರದ ಜನರ ಪರವಾಗಿ ಮಹಿಬೂಬು ಹಣಿಗಿ ರವರು ಧನ್ಯವಾದಗಳು ತಿಳಿಸಿದರು

ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ

Related Articles

Leave a Reply

Your email address will not be published. Required fields are marked *

Back to top button