ಇತ್ತೀಚಿನ ಸುದ್ದಿ
ದುರಂತ ಗೆಲುವಿನ ಸಂಭ್ರಮ ಅಳಿಸಿ ಹಾಕಿದೆ – ಗಾಯಾಳುಗಳನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಚಿನ್ನಸ್ವಾಮಿ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಭಾರೀ ಸಾವು-ನೋವು ಸಂಭವಿಸಿದೆ. ಸದ್ಯದ ಮಾಹಿತಿ ಪ್ರಕಾರ, 13 ಮಂದಿ ಜೀವ ಕಳೆದುಕೊಂಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದ್ದಾರೆ.