LIVE | RCB ಸಂಭ್ರಮಾಚರಣೆಯಲ್ಲಿ ದುರಂತ; ಸಾವಿನ ಸಂಖ್ಯೆ 11ಕ್ಕೆ ಏರಿಕೆ ಹಲವರ ಸ್ಥಿತಿ ಗಂಭೀರ

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿದೆ. ಇನ್ನೂ ಹಲವರು ಅಸ್ವಸ್ಥರಾಗಿದ್ದು, ಅವರಿಗೆ ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಕೆಲವರ ಸ್ಥಿತಿ ಗಂಭೀರವಾಗಿದೆ.
ವಿಧಾನಸೌಧದಲ್ಲಿ ಮೆಟ್ರೊ ಗೇಟ್ ತೆರೆದ ಬಿಎಂಆರ್‌ಸಿಎಲ್
ಜನಸಂದಣಿ ನಿಯಂತ್ರಿಸಲು ವಿಧಾನಸೌಧ ಮತ್ತು ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣದಲ್ಲಿ ಮೆಟ್ರೊ ನಿಲುಗಡೆಯನ್ನು ಸಂಜೆ 4.30ರಿಂದ ಸ್ಥಗಿತಗೊಳಿಸಲಾಗಿತ್ತು. ರಾತ್ರಿ 7.20ರಿಂದ ವಿಧಾನಸೌಧದಲ್ಲಿ ನಿಲುಗಡೆ ನೀಡಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗೆ ಸಿಎಂ ಭೇಟಿ
ಪ್ರೀತಿ-ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ: ಸಿಎಂ ಸಿದ್ದರಾಮಯ್ಯ
ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ: ಸಿಎಂ ಸಿದ್ದರಾಮಯ್ಯಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ, ಎಲ್ಲರೂ ಸುರಕ್ಷಿತವಾಗಿರಿ: ಡಿಕೆಶಿ
ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ: ಸಿಎಂ ಸಿದ್ದರಾಮಯ್ಯಸಿದ್ದರಾಮಯ್ಯ, ಮುಖ್ಯಮಂತ್ರಿಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ.

ಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ: ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿಆರ್‌ಸಿಬಿಯ ಐಪಿಎಲ್ ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾಗಬೇಕಿದ್ದ ಜನರು ದುರಂತಕ್ಕೆ ಒಳಗಾಗಿ, ಮೃತಪಟ್ಟಿರುವುದು ತೀವ್ರ ನೋವು ಮತ್ತು ಆಘಾತ ತಂದಿದೆ. ಮೃತರಿಗೆ ನನ್ನ ಸಂತಾಪಗಳು. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು. ಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಳ್ಳುತ್ತೇನೆ.