ಇತ್ತೀಚಿನ ಸುದ್ದಿ
ಕ್ರೀಡೆಗಳು ದೇಹದ ಸದೃಢತೆಗೆ ಉತ್ತಮ ಸಹಕಾರಿ

ಚಾಮರಾಜನಗರ: ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ದೇಹದ ಸದೃಢತೆಯನ್ನು ಕಾಪಾಡಿಕೊಳ್ಳಬೇಕು ಎಂದು ಜೋಸೆಫ್.ಎನ್ ಅವರು ತಿಳಿಸಿದರು.
ತಾಲೂಕಿನ ಸರಗೂರು ಗ್ರಾಮದಲ್ಲಿ ಲೆಜೆಂಡ್ ಕಪ್ 35 ವರ್ಷ ಮೇಲ್ಪಟ್ಟವರಿಗೆ ಜಗದೀಶ್ ಸುಮನ್ ಜೀವನ್ ಮೋಹನ್ ಇವರ ನೇತೃತ್ವದಲ್ಲಿ ನಡೆದ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬ ವ್ಯಕ್ತಿಯು ಉತ್ತಮ ಕ್ರೀಡಾಮನೋಭಾವನೆ ಬೆಳೆಸಿಕೊಂಡು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ಇಂತಹ ಕ್ರೀಡಾ ಚಟುವಟಿಕೆಗಳನ್ನು ನಡೆಸುವ ಮೂಲಕ ಮನುಷ್ಯನಿಗೆ ಆರೋಗ್ಯಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಇದೆ ವೇಳೆ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಶೇಷಣ್ಣ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಲಿಂಗರಾಜು, ಉಬೇದ್ ಉಲ್ಲಾ ಶರೀಫ್, ರವಿಶಂಕರ್, ಚೇತನ್,ಸುನಿಲ್.
ಕುಮಾರ್,ಭವಾನಿ, ಶಂಕರ್ ಸೇರಿದಂತೆ ಇತರರು ಇದ್ದರು.
ವರದಿ:ಇರಸವಾಡಿ ಸಿದ್ದಪ್ಪಾಜಿ tv8kannada ಚಾಮರಾಜನಗರ