ಗ್ಯಾರಂಟಿ ಯೋಜನೆಗಳು ಕಂಟಿನ್ಯೂ; ಬಜೆಟ್‌ನಲ್ಲಿ ಗೃಹಲಕ್ಷ್ಮಿ, ಯುವನಿಧಿ, ಶಕ್ತಿ, ಗೃಹಜ್ಯೋತಿ ಮೀಸಲಿಟ್ಟ ಹಣವೆಷ್ಟು?

Guarantee Schemes: ಈಗಾಗಲೇ ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಇನ್ನು ಇಂದು (ಮಾರ್ಚ್ 07) ಬಜೆಟ್ ಮಂಡನೆ ವೇಳೆ ಈ ಗ್ಯಾರಂಟಿಗಳಿಗೆ ಎಷ್ಟು ಅನುದಾನ ಮೀಸಲಿಡಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ಗಮನಿಸಿ.
ಇಂದು ರಾಜ್ಯ ಬಜೆಟ್ ಮಂಡನೆ ವೇಳೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಗುಡ್‌ನ್ಯೂಸ್ ನೀಡಿದ್ದಾರೆ. 2025-26 ನೇ ಸಾಲಿನಲ್ಲೂ ಗ್ಯಾರಂಟಿ ಯೋಜನೆಗಳು ಯಾವುದೇ ಅಡೆತಡೆ ಇಲ್ಲದೆ ಮಂದುವರೆಯಲಿವೆ ಎಂದು ತಿಳಿಸಿದ್ದಾರೆ.
2025ನೇ ಸಾಲಿನ ರಾಜ್ಯ ಬಜೆಟ್ ಅನ್ನು ಇಂದು ಸಿಎಂ ಸಿದ್ದರಾಮಯ್ಯ ಅವರು ಮಂಡನೆ ಮಾಡಿದ್ದು, ಈ ವೇಳೆ ಗ್ಯಾರಂಟಿ ಯೋಜನೆಗಳಿಗೆ 51,300 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದೇವೆ ಎಂದು ಘೋಷಣೆ ಮಾಡಿದರು. ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ ಹಾಗೂ ಯುವ ನಿಧಿ ಇವುಗಳು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಬಹು ನಿರೀಕ್ಷಿತ ಗ್ಯಾರಂಟಿ ಯೋಜನೆಗಳಾಗಿವೆ,
ಈ ಗ್ಯಾರಂಟಿ ಯೋಜನೆಗಳಿಂದ ತುಂಬಾ ಜನರಿಗೆ ಅನುಕೂಲವಾಗಿದೆ. ಅದರಲ್ಲೂ ಗೃಹಲಕ್ಷ್ಮಿ, ಶಕ್ತಿ ಯೋಜನೆಗಳಿಂದ ಮಹಿಳೆಯರಿಗೆ ತುಂಬಾ ಸಹಕಾರಿಯಾಗಿದೆ. ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳಿಂದ ಬಡ ಕುಟುಂಬಗಳಿಗೆ ಸಹಾಯಕವಾದ್ರೆ, ಯುವನಿಧಿ ಯೋಜನೆಯಿಂದ ನಿರುದ್ಯೋಗ ಯುವಕರಿಗೆ ತುಂಬಾ ಸಹಾಕಯವಾಗಲಿದೆ ಎಂದು ಹೇಳಲಾಗುತ್ತಿದೆ.
ಯಾವ ಯೋಜನೆಗಳಿಗೆ ಎಷ್ಟು ಅನುದಾನ?
* ಗೃಹಲಕ್ಷ್ಮೀ: ಗೃಹಲಕ್ಷ್ಮೀ ಯೋಜನೆಯಿಂದ 2024-25ನೇ ವರ್ಷದಲ್ಲಿ 1.22 ಕೋಟಿ ಕುಟುಂಬಗಳ ಮನೆ ಯಜಮಾನಿ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಹಣ ಹಾಕಲಾಗುತ್ತಿದೆ. ಇನ್ನು ಈ ವರ್ಷ ಸಹ ಈ ಯೋಜನೆಗೆ 28,608 ಕೋಟಿ ರೂಪಾಯಿ ಮೀಸಲಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.
* ಶಕ್ತಿ: ಈ ಯೋಜನೆಯಡಿಯಲ್ಲಿ ಎಲ್ಲಾ ಮಹಿಳೆಯರಿಗೂ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರಸಕ್ತ ವರ್ಷ ಯೋಜನೆಗೆ ಈ ಸಾಲಿನಲ್ಲಿ 5,300 ಕೋಟಿ ರೂಪಾಯಿ ಅನುದಾನವನ್ನು ಮೀಸಲಿಡಲಾಗಿದೆ ಎಂದು ಬಜೆಟ್‌ನಲ್ಲಿ ಸಿಎಂ ಘೋಷಣೆ ಮಾಡಿದರು.
* ಗೃಹಜ್ಯೋತಿ: ಗೃಹ ಜ್ಯೋತಿ ಯೋಜನೆಯಡಿ ಇದುವರೆಗೂ 9,657 ಕೋಟಿ ರೂಪಾಯಿ ಸಹಾಯಧನ ನೀಡಲಾಗಿದ್ದು, ಈ ವರ್ಷ 10,100 ಕೋಟಿ ರೂಪಾಯಿ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ಇನ್ಮುಂದೆಯೂ 200 ಯೂನಿಟ್ ಉಚಿತ ವಿದ್ಯುತ್ ಮುಂದುವರೆಯಲಿದೆ ಎಂದು ಘೋಷಣೆ ಮಾಡಿದ್ದಾರೆ.
* ಯುವನಿಧಿ: ಇನ್ನೂ ಯುವನಿಧಿ ಫಲಾನುಭವಿ ಯುವಕರಿಗೆ ಸಹಾಯಧನದ ಜೊತೆಗೆ ಭವಿಷ್ಯ ಕೌಶಲ್ಯ ತರಬೇತಿಯನ್ನು ಸರ್ಕಾರ ಆಯೋಜಿಸಲಿದೆ. ರಾಜ್ಯದ ಯುವಕರ ಉದ್ಯೋಗಾರ್ಹತೆ ಮತ್ತು ಉದ್ಯಮಶೀಲತೆಯನ್ನು ಮತ್ತಷ್ಟು ಉತ್ತೇಜಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಘೋಷಣೆ ಮಾಡಿದ್ದಾರೆ.
ಈ ಗ್ಯಾರಂಟಿ ಯೋಜನೆಗಳಿಂದ ತುಂಬಾ ಜನರಿಗೆ ಸಹಾಯ ಕೂಡ ಆಗಿದೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ ಉಚಿತ ಪಡಿತರ ನೀಡಲಾಗುತ್ತಿದೆ. ಹಾಗೆಯೇ ಶಕ್ಷಿ ಯೋಜನೆಯಡಿ ಬಹುತೇಕ ಮಹಿಳೆಯರಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇನ್ನು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಪ್ರತಿ ಮನೆಯ ಯಜಮಾನಿ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಜಮಾ ಮಾಡಲಾಗುತ್ತಿದ್ದು, ಈ ಯೋಜನೆಯ ಹಣವನ್ನು ತುಂಬಾ ಜನ ಮಹಿಳೆಯರು ಉತ್ತಮ ಉದ್ದೇಗಳಿಗೆ ಬಳಕೆ ಮಾಡಿಕೊಂಡಿರುವ ಉದಾಹರಣೆಗಳಿವೆ. ಬೋರ್‌ವೆಲ್, ಮನೆಗೆ ಬೇಕಾಗಿರುವ ಅಗತ್ಯ ವಸ್ತುಗಳು ಸೇರಿದಂತೆ ಇನ್ನೂ ಹಲವು ಉಪಯುಕ್ತ ಕೆಲಸಗಳಿಗೆ ಬಳಕೆ ಮಾಡಿಕೊಂಡಿದ್ದಾರೆ. ಆದರೆ ಇದೀಗ ನವೆಂಬರ್ ಹಾಗೂ ಡಿಸೆಂಬರ್ ತಿಂಗಳ ಹಣ ಬಂದಿಲ್ಲ ಎನ್ನುವ ಆರೋಪ ಕೇಳಿಬರುತ್ತಿದೆ. ಈ ಬಗ್ಗೆಯೂ ಸಚಿವರು ಸ್ಪಷ್ಟನೆ ನೀಡಿದ್ದು, ಶೀಘ್ರದಲ್ಲೇ ಹಣ ಹಾಕಲಾಗುತ್ತದೆ ಎಂದು ಹೇಳಿದ್ದಾರೆ.