ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಮ್ ಇಂಡಿಯಾ: ಮೊಹಮ್ಮದ್ ಶಮಿ ತಾಯಿ ಕಾಲು ಮುಗಿದ ವಿರಾಟ್ ಕೊಹ್ಲಿ; ವಿಡಿಯೊ

ದುಬೈ: ನಿನ್ನೆ ( ಮಾರ್ಚ್ 9 ) ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ ಪಂದ್ಯದಲ್ಲಿ ಕಿವೀಸ್ ವಿರುದ್ಧ ಟೀಮ್ ಇಂಡಿಯಾ 4 ವಿಕೆಟ್ಗಳ ಗೆಲುವು ಕಂಡು ಚಾಂಪಿಯನ್ ಆಗಿ ಹೊರಹೊಮ್ಮಿದೆ.
50 ಒವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಕಲೆಹಾಕಿದ ನ್ಯೂಜಿಲೆಂಡ್ ಭಾರತಕ್ಕೆ 252 ರನ್ಗಳ ಗುರಿಯನ್ನು ನೀಡಿತ್ತು.
ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಭಾರತ 49 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254ರನ್ ಬಾರಿಸಿತು.
ಈ ಗೆಲುವಿನ ಮೂಲಕ ಭಾರತ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದ್ದು, ಅತಿಹೆಚ್ಚು ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದ ತಂಡ ಎನಿಸಿಕೊಂಡಿದೆ. ಈ ಗೆಲುವಿನ ಮೂಲಕ ನ್ಯೂಜಿಲೆಂಡ್ ವಿರುದ್ಧದ 2000ನೇ ಇಸವಿಯ ಚಾಂಪಿಯನ್ಸ್ ಟ್ರೋಫಿ ಹಾಗೂ 2021ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಟ್ರೋಫಿಯ ಫೈನಲ್ ಪಂದ್ಯಗಳಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲನ್ನು ಕಂಡಿದ್ದರ ಸೇಡನ್ನು ತೀರಿಸಿಕೊಂಡಿದೆ.
ಈ ಯಶಸ್ಸಿಗೆ ಇಡೀ ತಂಡದ ಎಲ್ಲ ಆಟಗಾರರ ಅದ್ಭುತ ಆಟವೇ ಕಾರಣವಾಗಿದ್ದು, ಟ್ರೋಫಿ ಗೆದ್ದ ಬಳಿಕ ಟೀಮ್ ಇಂಡಿಯಾ ಆಟಗಾರರು ಸಂಭ್ರಮಿಸಿದ್ದಾರೆ. ಜತೆಗೆ ಆಟಗಾರರ ಕುಟುಂಬದವರೂ ಸಹ ಆಟಗಾರರೊಂದಿಗೆ ಗೆಲುವಿನ ಆಚರಣೆ ಮಾಡಿದ್ದಾರೆ.