ಜೇವರ್ಗಿ-ಚಾಮರಾಜನಗರ ಹೆದ್ದಾರಿ ಚತುಷ್ಪಥವಾಗಿ ಅಭಿವೃದ್ಧಿ ಮಾಡಿ ; ನಿತಿನ್ ಗಡ್ಕರಿ ಗೆ, ಎಚ್ ಡಿ.ಕುಮಾರಸ್ವಾಮಿ ಮನವಿ

ನವ ದೆಹಲಿ : ಜೇವರ್ಗಿ- ಚಾಮರಾಜನಗರ ನಡುವೆ ಮೇಲುಕೋಟೆ ವಿಧಾನಸಭೆ ಕ್ಷೇತ್ರದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥದಿಂದ ಚತುಷ್ಪಥ ಹೆದ್ದಾರಿಯನ್ನಾಗಿ ಅಭಿವೃದ್ಧಿ ಮಾಡುವ ಬಗ್ಗೆಯು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿದರು.
ಜೇವರ್ಗಿ- ಚಾಮರಾಜನಗರ ನಡುವೆ ಪಾಂಡವಪುರದ ಹಾಡುವ ಹೆದ್ದಾರಿ 150ಎ ದ್ವಿಪಥ ಹೆದ್ದಾರಿಯನ್ನು 597-560ರಿಂದ 606-670 ಕಿ.ಮೀ.ಚತುಷ್ಪಥ ಹೆದ್ದಾರಿಯನ್ನಾಗಿ ಅಭಿವೃದ್ಧಿಪಡಿಸಲು ಒಪ್ಪಿಗೆ ಕೊಡಬೇಕು ಹಾಗೂ ಪಾಂಡವಪುರ ರೈಲು ನಿಲ್ದಾಣದ ಬಳಿ ಇರುವ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಣೆ ಮಾಡುವ ರೈತರ ಅನುಕೂಲಕ್ಕಾಗಿ ಹೆದ್ದಾರಿ ಪಕ್ಷದಲ್ಲಿಯೇ ಟ್ರಕ್ ವೆ (Truck way) ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದರು.
ಇತ್ತೀಚೆಗೆ ತಾವು ಯೋಜನೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿದಾಗ ಸ್ಥಳೀಯ ಜನರು ಈ ಬಗ್ಗೆ ಮನವಿ ಮಾಡಿದ್ದರು. ಅಲ್ಲದೆ, ಖುದ್ದು ಸ್ಥಳದಲ್ಲಿ ಪರಿಶೀಲನೆಯನ್ನು ನಡೆಸಿದ್ದೇನೆ. ಹೀಗಾಗಿ ಟ್ರಕ್ ವೆ ನಿರ್ಮಾಣ ಅಗತ್ಯವಾಗಿ ಆಗಬೇಕಿದೆ. ಹೆದ್ದಾರಿಯನ್ನು ನಾಲ್ಕು ಪಥಕ್ಕೆ ಅಭಿವೃದ್ಧಿ ಮಾಡುವುದರಿಂದ ಈ ಭಾಗದ ಅಭಿವೃದ್ಧಿ, ಸರಕು ಸಾಗಣೆಗೆ ಅನುಕೂಲ ಆಗುತ್ತದೆ. ವ್ಯಾಪಾರ ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ ದೊರೆಯುತ್ತದೆ. ಅಲ್ಲದೆ, ಕೋಲಾರ ಲೋಕಸಭೆ ಕ್ಷೇತ್ರವೂ ಸೇರಿ ಕರ್ನಾಟಕದ ಹಲವಾರು ಹೆದ್ದಾರಿ ಯೋಜನೆಗಳ ಮಂಜೂರಾತಿ ಹಾಗೂ ಚಾಲ್ತಿಯಲ್ಲಿರುವ ಯೋಜನೆಗಳನ್ನು ವೇಗಗತಿಯಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಗಡ್ಕರಿ ಅವರೊಂದಿಗೆ ಸಚಿವರು ಮಾತುಕತೆ ನಡೆಸಿದರು.