ಕ್ರೈಂ
ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ : 6 ಮಂದಿ ವಲಸೆ ಕಾರ್ಮಿಕರು ಸ್ಥಳದಲ್ಲೇ ಸಾವು
ರಾಯ್ ಗಂಝ್ : ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಮಂದಿ ವಲಸೆ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಬುಧವಾರ ರಾತ್ರಿ 10.45 ರ ಸುಮಾರಿಗೆ ಪಶ್ಚಿಮ ಬಂಗಾಳದ ಉತ್ತರ ದಿನಾಜ್ ಪುರ್ ಜಿಲ್ಲೆಯ ರಾಯ್ ಗಂಜ್ ನಲ್ಲಿ ಖಾಸಗಿ ಬಸ್ ವಾಹನವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ವಲಸೆ ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ವಲಸೆ ಕಾರ್ಮಿಕರು ಜಾರ್ಖಾಂಡ್ ನಿಂದ ಲಖನೌಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದೆ. ಈ ವೇಳೆ 6 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ಉದ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.