ರಾಜ್ಯ

ಬಿಜೆಪಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ನಿಂದ ಪಂಜಿನ ಮೆರವಣಿಗೆ: ರೈತರ ಹತ್ಯೆ, ಪ್ರಿಯಾಂಕಾ ಗಾಂಧಿ ಬಂಧನ..!

ಬೆಂಗಳೂರು: ಉತ್ತರಪ್ರದೇಶದ ಲಖೀಂಪುರ್​ (Lakhimpur Violence) ರೈತ ಹೋರಾಟ (Farmers Protest) ಭಾನುವಾರ ಸಂಜೆ ಹೊತ್ತಿಗೆ ಗಲಭೆಗೆ ಕಾರಣವಾಗಿತ್ತು. ಕೇಂದ್ರ ಸಚಿವ ಅಜಯ್​ ಮಿಶ್ರಾ (Ajay Mishra) ಅವರ ಮಗ ಆಶೀಶ್​ ಮಿಶ್ರಾ (Asish Mishra) ಪ್ರತಿಭಟನಾ ನಿರತ ರೈತರ ಮೇಲೆ ಕಾರ್ ಚಲಾಯಿಸಿದ್ದರು. ಈ ಘಟನೆಯಲ್ಲಿ 4 ಜನ ರೈತರು ಮೃತಪಟ್ಟಿದ್ದಾರು. ನಂತರ ನಡೆದ ಗಲಭೆಯಲ್ಲಿ ಒಟ್ಟು 5 ಜನ ಸಾವಿಗೀಡಾಗಿದ್ದರು.

ಹೀಗಾಗಿ ಸೋಮವಾರ ಲಖೀಂಪುರ್​​ನಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿತ್ತು. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಲು ಆಗಮಿಸಿದ್ದ ಕಾಂಗ್ರೆಸ್​ ನಾಯಕಿ ಪ್ರಿಯಾಂಕ ಗಾಂಧಿ (Priyanka Gandhi) ಅವರನ್ನೂ ಬಂಧಿಸಲಾಗಿತ್ತು. ಈ ಘಟನೆಗೆ ರಾಷ್ಟ್ರಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಅಲ್ಲದೆ, ಉತ್ತರಪ್ರದೇಶದ ಈ ನಡೆಗೆ ಆಕ್ರೋಶ ಹೊರಹಾಕಿರುವ ರಾಜ್ಯ ಕಾಂಗ್ರೆಸ್​ (KPCC) ಘಟಕ ಸೋಮವಾರ ಪಂಜಿನ ಮೆರವಣಿಗೆ ನಡೆಸುವ ಮೂಲಕ ಬಿಜೆಪಿ ವಿರುದ್ಧ ತನ್ನ ಪ್ರತಿಭಟನೆಯನ್ನು ದಾಖಲಿಸಿದೆ.

ಮೆರವಣಿಗೆ ನಂತರ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ನಿಯೋಗದಲ್ಲಿ ಭೇಟಿ ಮಾಡಿ, ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿರುವ ಕಾಂಗ್ರೆಸ್​, “ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ದೇಶದ ಅನ್ನದಾತನಲ್ಲಿ ಅನಾಥ ಪ್ರಜ್ಞೆ ಕಾಡುವಂತಾಗಿದೆ. ರೈತ ವಿರೋಧಿ ಬಿಜೆಪಿ ಸರ್ಕಾರ ತನ್ನ ವಿರುದ್ಧ ಧ್ವನಿ ಎತ್ತುತ್ತಿರುವ ರೈತರ ಉಸಿರನ್ನೇ ಅಡಗಿಸಿದೆ” ಎಂದು ಆರೋಪಿಸಿದೆ.

Related Articles

Leave a Reply

Your email address will not be published. Required fields are marked *

Back to top button