Karnataka Rains Today ಬೆಂಗಳೂರು(ಅ.07): ರಾಜ್ಯದಲ್ಲಿ ವರುಣನ(Rainfall) ಆರ್ಭಟ ಕಡಿಮೆಯಾಗುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ. ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಭರ್ಜರಿ ಮಳೆಯಾಗುತ್ತಿದ್ದು , ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿತ್ತು. ಆದರೆ ರಾಜ್ಯದಲ್ಲಿ ಮುಂದಿನ ಕೆಲ ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ(Heavy rainfall) ಎಂದು ಭಾರತೀಯ ಹವಾಮಾನ ಇಲಾಖೆ(IMD) ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ(Bay Of Bengal) ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದಿಂದ ತಮಿಳುನಾಡು ಮತ್ತು ಕೇರಳದಾದ್ಯಂತ ಆಗ್ನೇಯ ಅರಬ್ಬಿ ಸಮುದ್ರದವರೆಗೆ ಮುಂಗಾರು ವಿಸ್ತರಿಸಿದ್ದು, ಇದು ಭಾರೀ ಮಳೆಗೆ ಕಾರಣವಾಗಿದೆ.
ಕರ್ನಾಟಕದಲ್ಲಿ ಮುಂಗಾರು ಅವಧಿಯಲ್ಲಿ 852 ಮಿ. ಮೀ. ಮಳೆಯಾಗಬೇಕಿತ್ತು. ಆದರೆ 787 ಮಿ. ಮೀ. ಮಳೆಯಾಗಿದೆ. ಈಗ ಮುಂಗಾರು ಅಂತ್ಯಗೊಂಡಿದ್ದರೂ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ.