Gold Rate on October 19 2021: ಕಳೆದ 3 – 4 ದಿನಗಳಿಂದ ದೇಶದಲ್ಲಿ ಚಿನ್ನದ ಬೆಲೆ (Gold Price) ಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಅಕ್ಟೋಬರ್ 16ರಿಂದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆದರೆ, ಬೆಂಗಳೂರಿನಲ್ಲಿ (Bengaluru) ಇಂದು ಮತ್ತೆ ಚಿನ್ನದ ಬೆಲೆ ಏರಿಕೆ(Gold Price Hike) ಕಂಡಿದ್ದು, ಆಭರಣ ಪ್ರಿಯರಿಗೆ ನಿರಾಸೆ ತಂದಿದೆ. ಇಂದು 10 ಗ್ರಾಂ ಚಿನ್ನಕ್ಕೆ 110 ರೂಪಾಯಿ ಹೆಚ್ಚಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,070 ರೂ. ಇತ್ತು. ಇಂದು ಸಹ ಅದೇ ಬೆಲೆ ಇದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 48,070 ರೂ. ಇತ್ತು. ಇಂದೂ ಕೂಡ ಅದೇ ಬೆಲೆಯಿದ್ದು ಯಾವುದೇ ವ್ಯತ್ಯಾಸವಾಗಿಲ್ಲ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..? Bengaluru Gold Price
ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 48,330 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,300 ರೂ. ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.
ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ.