ಬೆಂಗಳೂರು: ಮಳೆ(Rainfall)ಅರಾಯ ಬ್ರೇಕ್ ನೀಡಿದ್ದು, ಮುಂದಿನ ಎರಡು ದಿನಗಳ ರಾಜ್ಯದಲ್ಲ ಒಣಹವೆ ಮುಂದುವರಿಯಲಿದೆ. ಮಳೆಗಾಲದಿಂದ ನಿಧಾನವಾಗಿ ಚಳಿಗಾಲಕ್ಕೆ (Winter) ವಾತಾವರಣ ಬದಲಾಗುತ್ತಾ ತೆರಳುತ್ತಿದ್ದು, ಶೀತಗಾಳಿ (Cold wind) ಆರಂಭಗೊಳ್ಳುತ್ತಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ. ಆದ್ರೆ ಕಳೆದ ಮೂರು ದಿನಗಳಿಂದ ಸುರಿದ ಮಳೆಗೆ ರಾಜ್ಯದ ಕೆಲವು ಭಾಗಗಳಲ್ಲಿ ಕೃತಕ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ (Bengaluru Rainfall) ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮುಂದಿನ 24 ಗಂಟೆ ಮಳೆಯ ಅಬ್ಬರ ನಿಲ್ಲಲಿದೆ. ಬುಧವಾರ ಮತ್ತೆ ಮಳೆರಾಯ ನಗರಕ್ಕೆ ಎಂಟ್ರಿ ಕೊಡಲಿದ್ದಾನೆ.

ಮುಂದಿನ ಎರಡು ದಿನ ಮಳೆ ಸಾಧ್ಯತೆ
ಇನ್ನು ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಗದಗ, ಬಾಗಲಕೋಟೆ, ಹುಬ್ಬಳ್ಳಿ, ದಾವಣಗೆರೆಯಲ್ಲಿ ಒಣ ಹವೆ ಇರಲಿದೆ. ಶನಿವಾರ ಮತ್ತು ಭಾನುವಾರ ಸಹ ಈ ಭಾಗಗಳಲ್ಲಿ ಮಳೆಯಾಗಿತ್ತು. ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡದ ಕವಿದ ವಾತಾವರಣ ನಿರ್ಮಾಣವಾಗಿದ್ರೆ, ಅಲ್ಲಲ್ಲಿ ಚದುರಿದ ಮಳೆಯಾಗಿತ್ತು. ಗುರುವಾರದಿಂದ ಎರಡು ದಿನ ಮಳೆಯಾಗುವ ಸಾಧ್ಯತೆಗಳಿವೆ.
ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.