ಬೆಂಗಳೂರು (ಅಕ್ಟೋಬರ್ 25); ಮಾಜಿ ಸಿಎಂ ಸಿದ್ದರಾಮಯ್ಯ (Ex CM Siddaramaiah) ವಿರುದ್ಧ ಬಿಜೆಪಿ ನಾಯಕರು ಪ್ರತಿದಿನ ತರಹೇವಾರಿ ವಾಗ್ದಾಳಿ ನಡೆಸುತ್ತಿದ್ದಾರೆ. ಬಿಜೆಪಿ(BJP Leaders) ಹಿರಿಯ ನಾಯಕ ಶ್ರೀನಿವಾಸ ಪ್ರಸಾದ್ (Srinivas Prasad) ಸಿದ್ದರಾಮಯ್ಯ ಬಾದಾಮಿಗೆ (Badami) ಪಲಾಯನ ಮಾಡಿದ್ದು ಏಕೆ? ಎಂದು ಪ್ರಶ್ನೆ ಮಾಡಿದ್ದರೆ, ಬಿಜೆಪಿ ರಾಜ್ಯ ಘಟಕದಿಂದ (State BJP Party) ಟ್ವೀಟ್ ಮೂಲಕ ಸಿದ್ದರಾಮಯ್ಯ ಓರ್ವ ಜಾತೀವಾದಿ ಎಂದು ಹೀಯಾಳಿಸಲಾಗಿತ್ತು. “ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ.

ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಲಾಗಿತ್ತು. ಆದರೆ, ಬಿಜೆಪಿ ಆರೋಪದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, “ಹೌದು..ನಾನು ಜಾತಿವಾದಿಯೇ ಏನೀಗ?” ಎಂದು ತಿರುಗೇಟು ನೀಡಿದ್ದಾರೆ.
ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಸಿದ್ದರಾಮಯ್ಯ, “ಶೋಷಿತ ಜಾತಿಗಳು ತಮಗಾಗಿರುವ ಅನ್ಯಾಯವನ್ನು ಹೇಳಿಕೊಳ್ಳಲು ಸಂಘಟಿತರಾಗಿವುದು ತಪ್ಪಲ್ಲ, ಅದು ಜಾತಿವಾದವೂ ಅಲ್ಲ. ಅಂತಹ ಜಾತಿ ಸಮಾವೇಶಗಳಲ್ಲಿ ಭಾಗವಹಿಸುವುದು ಜಾತಿವಾದವಾದರೆ..ಹೌದು, ನಾನು ಜಾತಿವಾದಿ.. ಏನೀಗ” ಎಂದು ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ.