ರಾಜ್ಯ

ಇಂದು ಒನಕೆ ಓಬವ್ವ ಜಯಂತಿ… ಶುಭ ಕೋರಿದ ಅನೇಕ ಗಣ್ಯರು

ನವೆಂಬರ್​ 11ರಂದು (ಇಂದು) ವೀರ ವನಿತೆ ಒನಕೆ ಓಬವ್ವ ಜಯಂತಿಯಾಗಿದ್ದು, ಅನೇಕ ಗಣ್ಯರು ಸಾಮಾಜಿಕ ಜಾಲತಾಣದ ಮೂಲಕ ಒನಕೆ ಓಬವ್ವರನ್ನು (onake obavva) ನೆನೆದು ಜಯಂತಿಯ ಶುಭಾಶಯಗಳನ್ನು ತಿಳಿಸಿದ್ದಾರೆ.

ಪತಿ ಮುದ್ದಹನುಮನ ಅನುಪಸ್ಥಿತಿಯಲ್ಲಿ ಕೋಟೆಯ ನುಸುಳುಮಾರ್ಗದ ಕಾವಲಿನಲ್ಲಿ ಒನಕೆಯೊಂದಿಗೆ ತಾನೇ ನಿಂತು, ಹೈದರಾಲಿಯ ಸೇನಾನಿಗಳನ್ನು ಸದೆಬಡಿದ ವೀರವನಿತೆ, ಇತಿಹಾಸದ ಪುಟಗಳಲ್ಲಿ ಅಚ್ಚಾಗಿರುವ ಒನಕೆ ಓಬವ್ವ ಜಯಂತಿಯ ಶುಭಾಶಯಗಳು.

ಒನಕೆ ಓಬವ್ವರ (onake obavva) ಹೆಸರು ಚಿತ್ರದುರ್ಗದ ಇತಿಹಾಸದಲ್ಲಿ (Chitradurga History) ಮರೆಯಲಾಗದು, ಅವರನ್ನು ಕರ್ನಾಟಕ ವೀರ ವನಿತೆಯರಾದ ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕರ ಸಾಲಿನಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಒನಕೆ ಓಬವ್ವ 18ನೇ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮುದ್ರಹನುಮಪ್ಪನವರ ಹೆಂಡತಿಯಾಗಿದ್ದರು. ಚಿತ್ರದುರ್ಗದ ಮೇಲೆ ಹೈದರಾಲಿಯ ಸೈನಿಕರು ಹಠಾತ್ತಾಗಿ ಆಕ್ರಮಣ ಮಾಡಿದಾಗ ಓಬವ್ವ ತನ್ನ ಒನಕೆಯನ್ನು ಅಸ್ತ್ರವನ್ನಾಗಿ ಇಟ್ಟುಕೊಂಡು ಶತ್ರುಗಳನ್ನು ಎದುರಿಸಿದ್ದರು.

ಚಿತ್ರದುರ್ಗದ ಕೋಟೆಯ ಕಿಂಡಿಯಿಂದ ಬಂದ ನೂರಾರು ಶತ್ರು ಸೈನಿಕರನ್ನು ತನ್ನ ಒನಕೆಯಿಂದಲೇ ಜಜ್ಜಿ, ಹೊಡೆದು ಕೊಂದಿದ್ದರು. ಕೊನೆಯಲ್ಲಿ ಎದುರಾಳಿಯು ಬೆನ್ನ ಹಿಂದೆ ಬಂದದ್ದನ್ನು ಗಮನಿಸಲಾಗದೇ ಶತ್ರುವಿನ ಕತ್ತಿಗೆ ಬಲಿಯಾಗಿದ್ದರು.

ಪ್ರಸ್ತುತ ಆ ಕಿಂಡಿಯನ್ನು ಒನಕೆ ಓಬವ್ವನ ಕಿಂಡಿ ಅಥವಾ ಒನಕೆ ಕಿಂಡಿ ಎಂದು ಕರೆಯಲಾಗುತ್ತಿದೆ. ಚಿತ್ರದುರ್ಗದ ಆಟದ ಕ್ರೀಡಾಂಗಣಕ್ಕೆ ಜನಕೆ ಓಬವ್ವನ ಕ್ರೀಡಾಂಗಣ ಎಂದು ಹೆಸರನ್ನಿಟ್ಟು ಗೌರವಿಸಲಾಗಿದೆ. ಒನಕೆ ಓಬವ್ವರ ಜನ್ಮ ದಿನವಾದ ನವೆಂಬರ್ 11ರಂದು (ಇಂದು) ಒನಕೆ ಓಬವ್ವ ಜಯಂತಿಯನ್ನು (onake obavva Jayanthi) ಆಚರಣೆ ಮಾಡುವಂತೆ ಇದೀಗ ತೀರ್ಮಾನಿಸಲಾಗಿದ್ದು, ನ.11ರಂದು ಒನಕೆ ಓಬವ್ವ ಜಯಂತಿಯನ್ನು (onake obavva Jayanthi) ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸಲು ಸರ್ಕಾರ ಆದೇಶಿಸಿತ್ತು. ಆದರೆ ವಿಧಾನ ಪರಿಷತ್ ಚುನಾವಣೆ (Karnataka Council Election) ಹಿನ್ನೆಲೆ ನವೆಂಬರ್ 11 ರಂದು (ಇಂದು) ಸರ್ಕಾರ ಓಬವ್ವ ಜಯಂತಿ (Onake Obavva Jayanthi) ಆಚರಣೆಯನ್ನು ಮುಂದೂಡಲಾಗಿದೆ.

Related Articles

Leave a Reply

Your email address will not be published. Required fields are marked *

Back to top button