ಕ್ರೈಂ
15 ಅಧಿಕಾರಿಗಳ ನಿವಾಸದ ಮೇಲೆ ACB ದಾಳಿ , ಪತ್ತೆಯಾದ ಆಸ್ತಿ ಕಂಡು ಅಧಿಕಾರಿಗಳೇ ದಂಗು
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ 15 ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (Anti-Corruption Bureau- ACB) ದಾಳಿ ನಡೆಸಿದೆ. 15 ಅಧಿಕಾರಿಗಳಿಗೆ ಸಂಬಂಧಪಟ್ಟ 60 ಸ್ಥಳಗಳ ಮೇಲೆ ನಡೆದ ಈ ದಾಳಿಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ, ನಗದು, ಆಸ್ತಿ ಪತ್ರಗಳು ಪತ್ತೆಯಾಗಿವೆ.
ದಾಳಿಯಲ್ಲಿ 100 ಅಧಿಕಾರಿಗಳು ಭಾಗಿ :
ಕರ್ನಾಟಕ ಸರ್ಕಾರದ 15 ಅಧಿಕಾರಿಗಳ ವಿರುದ್ಧ ನಡೆದ ದಾಳಿಯಲ್ಲಿ 8 ಎಸ್ಪಿಗಳು, 100 ಅಧಿಕಾರಿಗಳು ಮತ್ತು 300 ನೌಕರರು ಪಾಲ್ಗೊಂಡಿದ್ದರು. ಭ್ರಷ್ಟಾಚಾರ ನಿಗ್ರಹ ದಳದ (ACB) ತಂಡವು ಸರ್ಕಾರಿ ಅಧಿಕಾರಿಗಳಿಗೆ ಸೇರಿದ 60 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ. ಶೋಧದ ನಂತರ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಎಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.