ಒಕ್ಕಲಿಗರ ಸಂಘದ ಚುನಾವಣೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ..!
ಬೆಂಗಳೂರು, ಡಿ.10- ಒಕ್ಕಲಿಗರ ಸಂಘದ ಚುನಾವಣೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ಒಕ್ಕಲಿಗರ ಸಂಘದ ಮತದಾರರ ಪಟ್ಟಿ ನವೀಕರಿಸಿಲ್ಲ. ಸಂಘದ ಬೈಲಾ ಪಾಲನೆ ಮಾಡದೆ ಚುನಾವಣೆ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಇಂದು ವಜಾಗೊಳಿಸಿ ಏಕಸದಸ್ಯ ಪೀಠದ ಆದೇಶವನ್ನು ಎತ್ತಿ ಹಿಡಿಯಿತು.
ಕೃಷ್ಣೇಗೌಡ ಎಂಬುವವರು ಒಕ್ಕಲಿಗರ ಸಂಘ ಚುನಾವಣೆಗೆ ತಡೆ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಹಂತದಲ್ಲಿ ಚುನಾವಣೆಗೆ ತಡೆನೀಡಲು ಸಾಧ್ಯವಿಲ್ಲ. ಚುನಾವಣಾ ವೆಚ್ಚದ ಲೆಕ್ಕಪತ್ರವನ್ನು ಕಾಯ್ದಿರಿಸಬೇಕೆಂದು ಸೂಚಿಸಿ ಚುನಾವಣೆಗೆ ತಡೆ ನೀಡಲು ನಿರಾಕರಿಸಿತ್ತು.
ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಏಕಸದಸ್ಯ ಪೀಠದ ಆದೇಶವನ್ನು ಎತ್ತಿ ಹಿಡಿದಿದ್ದು, ಮೇಲ್ಮನವಿಯನ್ನು ವಜಾಗೊಳಿಸಿದೆ.