ಡಿಜಿಪಿ ರವೀಂದ್ರನಾಥ್ ರಾಜೀನಾಮೆ?
ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದಲ್ಲಿ (ಡಿಸಿಆರ್ಇ) ಹೆಚ್ಚುವರಿ ಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುವಾಗ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಉದ್ಯೋಗ ಪಡೆದ ಪ್ರಕರಣ ವಿಚಾರಣೆ ನಡೆಸುತ್ತಿದ್ದೆ. ಆ ವೇಳೆ ಪತ್ರಿಕಾಗೋಷ್ಟಿಯೊಂದರಲ್ಲಿ ಇಬ್ಬರ ಪ್ರಭಾವಿಗಳ ಹೆಸರು ಬಹಿರಂಗಪಡಿಸಿದ್ದಲ್ಲದೆ ಅವರು ಡಿಸಿಆರ್ಇ ಅಧಿಕಾರಿಗಳ ಮುಂದೆ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದೆ. ಅಂದಿನಿಂದ ಸರ್ಕಾರದ ಮೇಲೆ ಪ್ರಭಾವ ಬೀರುವ ವ್ಯಕ್ತಿಗಳು ನನ್ನನ್ನ ಟಾರ್ಗೆಟ್ ಮಾಡುತ್ತಿದ್ದಾರೆ” ಎಂದು ಡಾ.ಪಿ ರವೀಂದ್ರನಾಥ್ ಆರೋಪಿಸಿದ್ದಾರೆ.
ನಿಜವಾದ ಎಸ್ಎಸ್/ಎಸ್ಟಿ ಸಮುದಾಯದಕ್ಕೆ ನ್ಯಾಯ ದೊರಕಿಸಿಕೊಡಲು ನಾನು ಮತ್ತಷ್ಟು ಕಾಲ ಡಿಸಿಆರ್ಇ ನಲ್ಲಿ ಇರಬೇಕಿತ್ತು. ನಾನು ಸರ್ಕಾರದ ವಿರುದ್ಧವಿರಲಿಲ್ಲ. ನನ್ನನ್ನು ವರ್ಗಾವಣೆ ಮಾಡಿ ಎಂದು ಕೇಳಿಕೊಂಡಿರಲಿಲ್ಲ. ಈ ವರ್ಗಾವನೆ ಸಾರ್ವಜನಿಕ ಹಿತದೃಷ್ಟಿಯಿಂದ ನಡೆದುದ್ದಲ್ಲ. ಬದಲಿಗೆ ನಿಯಮಾವಳಿಗಳನ್ನು ಉಲ್ಲಂಘಿಸಿ, ಪಿತೂರಿ ನಡೆಸಿ ನನ್ನ ವರ್ಗಾವಣೆ ಮಾಡಲಾಗಿದೆ.
ಎಸ್ಸಿ ಮತ್ತು ಎಸ್ಟಿ (ದೌರ್ಜನ್ಯ ತಡೆ) 1995 ರ ನಿಯಮಗಳ ಪ್ರಕಾರ ಸಂರಕ್ಷಣಾ ಕೋಶವನ್ನು ಸ್ಥಾಪಿಸಲು ಸರ್ಕಾರ ಆದೇಶ ಹೊರಡಿಸುವಂತೆ ನಾನು ಕರ್ನಾಟಕ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೆ ಮನವಿ ಮಾಡಿದ್ದೆ. ಆಗ ಅವರು ನನ್ನನ್ನು ನಡೆಸಿಕೊಂಡ ರೀತಿಯಿಂದ ಬಹಳ ನೋವಾಗಿದೆ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.