ಇತ್ತೀಚಿನ ಸುದ್ದಿ

ವರ್ಷಗಳೇ ಕಳೆದರೂ ‘ಆರದ ದೀಪ, ಬಾಡದ ಹೂ’ : ‘ಹಾಸನಾಂಬೆ ಪವಾಡ’ ಕಂಡು ಪುನಿತರಾದ ಭಕ್ತರು

ಆದ್ಯಾತ್ಮ

ಹಾಸನ: ಐತಿಹಾಸಿಕ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ನಿನ್ನೆಯಿಂದ ಓಪನ್ ಆಗಿದ್ದು, ಇಂದಿನಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮೊದಲ ದಿನವೇ ದರ್ಶನಕ್ಕೆ ಭಕ್ತರ ದಂಡೇ ಹರಿದು ಬಂದಿದೆ.

ಆಶ್ವೀಜ ಮಾಸದ ಮೊದಲ ಗುರುವಾರ (ನಿನ್ನೆ) ಅರಸು ವಂಶಸ್ಥರು ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಾಗಿದೆ.ವರ್ಷದ ಹಿಂದೆ ಹಚ್ಚಿಟ್ಟದ್ದ ದೀಪ ಇನ್ನು ಉರಿಯುತ್ತಿತ್ತು, ಹಾಗೂ ಅಲಂಕರಿಸಿದ ಹೂಗಳು ಕೂಡ ಬಾಡದೇ ಹಾಳಾಗಿರಲಿಲ್ಲ, ಈ ಪವಾಡ ಕಂಡು ಜನರು ಪಾವನರಾಗಿದ್ದಾರೆ.

ಇಂದು ಮುಂಜಾನೆಯೇ ಭಕ್ತರು ಹಾಸನಾಂಬೆಯ ದರ್ಶನ ಪಡೆಯಲು ಆಗಮಿಸಿದ್ದಾರೆ. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ದರ್ಶನಕ್ಕಾಗಿ ರಾಜ್ಯ ಮಾತ್ರವಲ್ಲದೆ, ಹೊರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಬರುತ್ತಾರೆ.

ಇಂದಿನಿಂದ ರಿಂದ ನ.3ರವರೆಗೆ ಹಾಸನಾಂಬ ದರ್ಶನಕ್ಕೆ ಭಕ್ತರಿಗೆ ವ್ಯವಸ್ಥೆ ಮಾಡಲಾಗಿದೆ. ಮೊದಲ ಹಾಗೂ ಕೊನೆಯ ದಿನ ದರ್ಶನ ಇರುವುದಿಲ್ಲ. ಉಳಿದಂತೆ ಎಲ್ಲ ದಿನಗಳು ದಿನದ 24 ಗಂಟೆ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕೃಷ್ಣಪ್ಪ ನಾಯಕನ ಕಾಲದಿಂದಲೂ ಆಶ್ವೀಜ ಮಾಸ ಪೌರ್ಣಮಿಯ ನಂತರ ಬರುವ ಗುರುವಾರದಂದು ಹಾಸನಾಂಬೆಯ ದೇವಾಲಯ ತೆರೆಯಲ್ಪಡುತ್ತದೆ. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತಾದಿಗಳು ಅಂದು ದರ್ಶನಾಕಾಂಕ್ಷಿಗಳಾಗಿ ಬಂದು ದೇವಿಯ ದರ್ಶನ ಪಡೆಯುತ್ತಾರೆ.

ಹೀಗೆ ವರ್ಷಕ್ಕೊಮ್ಮೆ ದೇಗುಲದ ಬಾಗಿಲ ಪುರ ಪ್ರಮುಖರಾದ ತಹಸಿಲ್ದಾರರು/ ಕಮೀಷನರ್ ಶಾಸಕರು ಮುಂತಾದವರ ಸಮ್ಮುಖದಲ್ಲಿ ತೆರೆಯಲಾಗುತ್ತದೆಯಲ್ಲದೇ, ಬಲಿಪಾಡ್ಯಮಿಯ ಮಾರನೇ ದಿನ ಬಾಗಿಲು ಅವರೆಲ್ಲರ ಸಮ್ಮುಖದಲ್ಲಿ ದೇವಿಗೆ ದೀಪ, ಅಕ್ಕಿ ನೈವಿದ್ಯಾದಿ ಅಲಂಕಾರಗಳು ಇರುವಂತೆಯೇ ಮುಚ್ಚಲಾಗುತ್ತದೆ.

Related Articles

Leave a Reply

Your email address will not be published. Required fields are marked *

Back to top button