ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ಬೆಂಗಳೂರು ನ.01: ರಾಜ್ಯದಲ್ಲಿಂದು ಡಬಲ್ ಧಮಾಕ. ಒಂದೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ, ಮತ್ತೊಂದೆಡೆ ದೀಪಾವಳಿ ಹಬ್ಬದ ಸಡಗರ. ಕನ್ನಡ ಹಬ್ಬದ ದಿನ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ನಟ ಶಿವರಾಜ್ ಕುಮಾರ್ ಸೇರಿದಂತೆ ಗಣ್ಯರು ಸೆಲೆಬ್ರೆಟಿಗಳು ಶುಭಾಶಯ ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಎಕ್ಸ್ ಖಾತೆಯ ಮೂಲಕ ಶುಭಾಶಯ ತಿಳಿಸಿದ್ದಾರೆ.
https://x.com/narendramodi/status/1852191757162721577?ref_src=twsrc%5Etfw%7Ctwcamp%5Etweetembed%7Ctwterm%5E1852191757162721577%7Ctwgr%5E6a13d36df5984798f5c2e539e64e3f20780fc367%7Ctwcon%5Es1_c10&ref_url=https%3A%2F%2Fapi-news.dailyhunt.in%2F
ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭಾಯ ಕೋರಿದ್ದಾರೆ.