ಅಧ್ಯಕ್ಷ ಮತ್ತು ರಾಜ್ಯ ಪರಿಷತ್ ಸ್ಥಾನಕ್ಕೆ ನೇರ ಸ್ಪರ್ಧೆ

ಕೊಟ್ಟೂರು : ತಾಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ 11 ಇಲಾಖೆಯಿಂದ 20 ಸ್ಥಾನಗಳ ನಿರ್ದೇಶಕರ ಸ್ಥಾನಗಳಿಗೆ ಈಗಾಗಲೇ ಚುನಾವಣೆ ನಡೆದಿರುತ್ತದೆ. ಈಗ ಅಧ್ಯಕ್ಷ, ಖಜಾಂಚಿ ಮತ್ತು ರಾಜ್ಯ ಪರಿಷತ್ ಸ್ಥಾನಗಳಿಗೆ ಚುನಾವಣೆಯ ಪ್ರಕ್ರಿಯೆ ಪ್ರಾರಂಭವಾಗಿದ್ದು, 11.11.2024 ರಂದು ನಾಮಪತ್ರಗಳ ಹಿಂಪಡೆಯಲು ಅಂತಿಮ ದಿನವಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಪ್ರಾಥಮಿಕ ಶಾಲೆಯ ಕ್ಷೇತ್ರದಿಂದ ಆಯ್ಕೆಯಾದ ಸಿದ್ದಪ್ಪ ಹಾಗೂ ಪಶುಪಾಲನಾ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆ ಮತಕ್ಷೇತ್ರದಿಂದ ಆಯ್ಕೆಯಾದ – ಯೋಗೇಶ್ವರ ಡಿ, ಹಿರಿಯ ಪಶುವೈಧ್ಯಕೀಯ ಪರಿವೀಕ್ಷಕರು, ನಿಂಬಳಗೇರಿ ಇವರಿಗೆ ಹಾಗೂ ರಾಜ್ಯ ಪರಿಷತ್ ಸ್ಥಾನಕ್ಕೆ ಕಂದಾಯ ಇಲಾಖೆಯ ಕ್ಷೇತ್ರದಿಂದ ಆಯ್ಕೆಯಾದ ಎಸ್ ಎಂ ಗುರುಬಸವರಾಜ ಟೈಪಿಸ್ಟ್ ಹಾಗೂ ಅರಣ್ಯ ಇಲಾಖೆ ಮತ ಕ್ಷೇತ್ರದಿಂದ ಆಯ್ಕೆಯಾದ ಹೇಮಚಂದ್ರ ಕೆ , ಉಪವಲಯ ಅರಣ್ಯಾಧಿಕಾರಿಗಳು, ಸಾಮಾಜಿಕ ಅರಣ್ಯ ವಲಯ ಇವರ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿರುತ್ತದೆ.
ಖಜಾಂಚಿ ಸ್ಥಾನಕ್ಕೆ ವೀರೇಶ ತುಪ್ಪದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರು ಒಬ್ಬರೇ ನಾಮಪತ್ರವನ್ನು ಸಲ್ಲಿಸಿರುವ ಕಾರಣ ಅವಿರೋಧವಾಗಿ ಆಯ್ಕೆ ಯಾಗಿರುತ್ತಾರೆ.
ದಿನಾಂಕ 16.11.2024 ರಂದು ಬೆಳಿಗ್ಗೆ 11.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಮತದಾನ ಪ್ರಕ್ರಿಯೆ ಮುಗಿನ ನಂತರ ಮತ ಮತ ಎಣಿಕೆ ಮಾಡಿ, ಫಲಿತಾಂಶವನ್ನು ಸಹಾ ಪ್ರಕಟಿಸಲಾಗುವುದೆಂದು ಚುನಾವಣಾಧಿಕಾರಿಗಳಾದ ಸುರೇಶ್ ಇವರು ಮಾಹಿತಿಯನ್ನು ನೀಡಿರುತ್ತಾರೆ.