ರಾಜಕೀಯ

ಪ್ರಧಾನಿ ಮೋದಿಯವರೇ ನಾನು ರಾಜಕೀಯ ನಿವೃತ್ತಿ ತಗೊತೀನಿ, ನೀವು ನಿವೃತ್ತಿ ಘೋಷಿಸ್ತೀರಾ: ಸಿಎಂ ಸಿದ್ದರಾಮಯ್ಯ ಸವಾಲ್

ಮೈಸೂರು : ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ ನ್ನು 2140 ರೂಪಾಯಿಗಳಿಗೆ ಖರೀದಿ ಮಾಡಿದ್ದಾರೆ.

ಇದಕ್ಕೆ ನರೇಂದ್ರ ಮೋದಿ ಏನು ಹೇಳುತ್ತಾರೆ? ಭ್ರಷ್ಟಾಚಾರ ಮಾ ಡಿರುವುದು ಅವರ ಸರ್ಕಾರ ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ.ಭ್ರಷ್ಟಾಚಾರ ಮಾಡುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು ಕಾಂಗ್ರೆಸ್ ಪಕ್ಷ ಹಗಲು ದರೋಡೆ ಮಾಡುತ್ತಿದೆ. ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿದ್ದಾರೆ ಎಂದಿರುವ ಬಗ್ಗೆ ಮಾಧ್ಯಮದವರಿಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ

ನರೇಂದ್ರ ಮೋದಿ ಅವರು ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಮಾಡಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ಒಂದೇ ಒಂದು ರೂಪಾಯಿ ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು. ಅವರು ಪ್ರಧಾನ ಮಂತ್ರಿ ಸ್ಥಾನ ನೀಡಲು ಸಿದ್ಧರಿದ್ದಾರೆಯೇ ? ಸುಳ್ಳು ಹೇಳಲು ಇತಿಮಿತಿ ಇರಬೇಕು ಎಂದರು.

ಉಪಚುನಾವಣೆ: ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರು ಗೆಲ್ಲಲಿದೆ

ಮತದಾನ ನಡೆದಿರುವ ಮೂರೂ ಕ್ಷೇತ್ರಗಳಲ್ಲಿ ಜನಸ್ಪಂದನೆ ನೋಡಿದರೆ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

Related Articles

Leave a Reply

Your email address will not be published. Required fields are marked *

Back to top button