ದೇಶ

ಪ್ರಶ್ನೆಪತ್ರಿಕೆ ಸೋರಿಕೆ ಮೂಲಕ ಹಣ ಗಳಿಸಿ ಬಿಜೆಪಿ ಚುನಾವಣೆ ನಡೆಸುತ್ತಿದೆ: ಜಾಖರ್ಂಡ್‌ ಸಿಎಂ ಸೊರೇನ್ ಆರೋಪ,

ರಾಂಚಿ: ಬಿಜೆಪಿ ತಾನು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮೂಲಕ ಹಣ ಗಳಿಸಿ ಹಣವನ್ನು ಬಿಜೆಪಿಯು ಇತರ ರಾಜ್ಯಗಳಲ್ಲಿನ ಚುನಾವಣಾ ಪ್ರಚಾರಗಳಿಗೆ ಬಳಿಸಿಕೊಳ್ಳುತ್ತಿದೆ ಎಂದು ಜಾಖರ್ಂಡ್ ಮುಖ್ಯಮಂತ್ರಿ ಹೇಮಂತ್ಸೊರೇನ್ ಆರೊಪಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆದಿರುವ ಪ್ರಶ್ನೆಪತ್ರಿಕೆಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆಗಳ

ವಿರುದ್ಧ ಅವರು ವಾಗ್ದಾಳಿ ನಡೆಸಿದ್ದಾರೆ. ಎಕ್ಸ್ ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಸೊರೇನ್, ಪ್ರಶ್ನೆಪತ್ರಿಕೆ ಸೋರಿಕೆಯಿಂದ ಗಳಿಸಿದ ಹಣದಿಂದ ಜಾಖರ್ಂಡ್ ಚುನಾವಣೆಯಲ್ಲಿ ಬಿಜೆಪಿ ಆಡಂಬರ ನಡೆಸುತ್ತಿದೆ.

ಇತ್ತೀಚಿನ ದಿನಗಳಲ್ಲಿ ಕೋಳಿ ಕಳ್ಳತನದ ಪ್ರಕರಣಗಳನ್ನೂ ತನಿಖೆ ನಡೆಸುತ್ತಿರುವ ಇ.ಡಿ, ಸಿಬಿಐ, ಎಎ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ತನಿಖೆ ಆರಂಭಿಸಿಲ್ಲ. ಏಕೆಂದರೆ, ಅದರ ಹಿಂದೆ ಬಿಜೆಪಿ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಚುನಾವಣೆಗಳು ಮುಗಿದ ನಂತರ ಅಕ್ರಮವಾಗಿ ಸಂಪಾದಿಸಿದ ಹಣದಿಂದ ಶಾಸಕರು, ಸಂಸದರನ್ನು ಖರೀದಿಸಲಿದೆ ಎಂದು ಆಪಾದಿಸಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಪರೀಕ್ಷೆ ಪತ್ರಿಕೆಗಳು ಸೋರಿಕೆಯಾಗುತ್ತಿವೆ. ಮಧ್ಯಪ್ರದೇಶದಲ್ಲಿ ನಡೆದ ವ್ಯಾಪಂ ಹಗರಣವು ಹಲವು ಜೀವಗಳನ್ನು ಬಲಿ ಪಡೆದಿದೆ. ಕೇವಲ ಒಂದು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದಕ್ಕೆ ನಾವು ಕಠಿಣ ಕಾನೂನು ರೂಪಿಸಿದ್ದೇವೆ.

ಆದರೆ ಬಿಜೆಪಿ ಅದನ್ನು ವಿರೋಧಿಸಿ ರಾಜಭವನಕ್ಕೆ ಹೋಗಿತ್ತು ಎಂದು ಟೀಕಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button