
ಚಾಮರಾಜನಗರ: ಜಿಲ್ಲೆಯ ಸಮಸ್ಯೆಗಳ ಬಗ್ಗೆ ಸರ್ಕಾರದ ಜೊತೆ ಕರ್ನಾಟಕ ರಕ್ಷಣಾ ವೇದಿಕೆ ಚರ್ಚಿಸಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ತಿಳಿಸಿದರು.
ನಗರದ ರಾಮಸಮುದ್ರದ ಗೌಡ್ರು ಕಾಂಪ್ಲೆಕ್ಸ್, ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪ್ರಧಾನ ಕಚೇರಿಯನ್ನು ಇಂದು ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಘಟನೆಕಾರರು ಯಾವುದೇ ರಾಷ್ಟ್ರೀಯ ಪಕ್ಷಗಳ ಗುಲಾಮರಾಗದೆ ನಾಡು ನುಡಿ ಜಲ ರಕ್ಷಣೆಗಳಿಗೆ ನಿರಂತರವಾಗಿ ಕೆಲಸ ಮಾಡಬೇಕು.ನಾವು ನಿಮ್ಮ ಜೊತೆ ನಿರಂತರವಾಗಿ ಇರುತ್ತೇವೆ ಅಲ್ಲದೆ ಹೆಚ್ಚಾಗಿ ಯುವಕರು,ಕನ್ನಡಿಗರು ಕರವೆಗೆ ಸೇರುವ ಮೂಲಕ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಬಗೆಹರಿಸಬಹುದು ಇನ್ನು ಮುಂದೆ ಹೆಚ್ಚು ಬಾರಿ ಜಿಲ್ಲೆಗೆ ಆಗಮಿಸಿ ಅಭಿವೃದ್ಧಿ ಕೆಲಸಗಳ ಬಗ್ಗೆ ಗಮನಹರಿಸಲಾಗುತ್ತದೆ ಹಾಗೆಯೇ ಇಂಗ್ಲಿಷ್ ವ್ಯಾಮೋಹಕ್ಕೆ ಒಳಗಾಗದೆ ಕನ್ನಡಕ್ಕೆ ಹೆಚ್ಚು ಹೊತ್ತು ನೀಡುವ ಮೂಲಕ ಪೋಷಕರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗೆ ಸೇರಿಸಿ ಕನ್ನಡವನ್ನು ಉಳಿಸಿ ಬೆಳೆಸಲು ಮುಂದಾಗಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ನವೀನ್ ಕುಮಾರ್, ಉಪಾಧ್ಯಕ್ಷ ಮಂಜೇಶ್, ಕಾರ್ಯದರ್ಶಿ ಮಂಜು.ಎಂ ಹಾಗೂ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.
ವರದಿ:ಇರಸವಾಡಿ ಸಿದ್ದಪ್ಪಾಜಿ tv8kannada ಚಾಮರಾಜನಗರ