ಆರೋಗ್ಯ

ಮತ್ತೆ ಗಗನಕ್ಕೇರಿದ ಈರುಳ್ಳಿ, ಬೆಳ್ಳುಳ್ಳಿ ಬೆಲೆ: ದರ ಏರಿಕೆ ಕಂಡು ಗೃಹಿಣಿಯರು ಕಂಗಾಲು ,

ಬೆಂಗಳೂರಿನಲ್ಲಿ : ಬೆಳ್ಳುಳ್ಳಿ ಬೆಲೆ ಮತ್ತೆ ಗಗನಕ್ಕೇರಿದೆ. ರಿಟೇಲ್ನಲ್ಲಿ ಬೆಳ್ಳುಳ್ಳಿ ಕೆಜಿಗೆ 500 ರಿಂದ 550 ರೂಪಾಯಿ ಇದ್ದರೆ, ಎಪಿಎಂಸಿ ಮಾರುಕಟ್ಟೆಯಲ್ಲಿ 400 ರಿಂದ 450 ರೂಪಾಯಿಗೆ ಮಾರಾಟವಾಗುತ್ತಿದೆ. ಈರುಳ್ಳಿ ರಿಟೇಲ್ನಲ್ಲಿ 70 ರಿಂದ 80 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಎಪಿಎಂಸಿಯಲ್ಲಿ ಹೋಲ್ಸೇಲ್ ನಲ್ಲಿ 50 ರಿಂದ 60 ರೂಪಾಯಿಗೆ ಮಾರಾಟವಾಗುತ್ತಿದೆ.

ಈರುಳ್ಳಿ ಬೆಲೆ ನೂರರ ಗಡಿ ತಲುಪುವ ಸಾಧ್ಯತೆ ಇದೆ. ಈಗಾಗಲೇ ಎಪಿಎಂಸಿ ಮಾರುಕಟ್ಟೆಯಲ್ಲಿ ಸಾಧಾರಣ ಈರುಳ್ಳಿ ಕೆಜಿಗೆ 40 ರಿಂದ 50 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಇತ್ತ ಉತ್ತಮ ಗುಣಮಟ್ಟದ ಈರುಳ್ಳಿ ಕೆಜಿಗೆ 60 ರಿಂದ 70 ರೂಪಾಯಿಗೆ ಮಾರಾಟವಾಗುತ್ತದೆ. ಸಣ್ಣಪುಟ್ಟ ಮಾರುಕಟ್ಟೆಯಲ್ಲಿ, ರಸ್ತೆಬದಿಯಲ್ಲಿ ಸಾಮಾನ್ಯ ಈರುಳ್ಳಿ ಕೆಜಿಗೆ 50 ರಿಂದ 60 ರೂಪಾಯಿಗೆ ಮಾರಾಟವಾಗುತ್ತಿದೆ. ಉತ್ತಮ ಗುಣಮಟ್ಟದ ಈರುಳ್ಳಿ ಕೆಜಿಗೆ 70 ರಿಂದ 80 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.ಬೆಳ್ಳುಳ್ಳಿ ದರ ಈಗಾಗಲೇ ಅರ್ಧಶತಕ ಬಾರಿಸಿ ಮುನ್ನುಗ್ಗುತ್ತಿದೆ. ಎಪಿಎಂಸಿಯಲ್ಲಿ ಸಾಮಾನ್ಯ ಬೆಳ್ಳುಳ್ಳಿಗೆ 400 ರಿಂದ 450 ರುಪಾಯಿಗೆ ಮಾರಾಟವಾಗುತ್ತಿದೆ. ಫಸ್ಟ್ಕ್ವಾಲಿಟಿ 450 ರಿಂದ 500 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಇತ್ತ ರಿಟೇಲ್ ಮಾರುಕಟ್ಟೆಯಲ್ಲಿ, ಅಂದರೆ ಬೀದಿ ಬದಿ ವ್ಯಾಪಾರಿಗಳು ಮತ್ತು ಸಣ್ಣಪುಟ್ಟ ಮಾರುಕಟ್ಟೆಗಳಲ್ಲಿ ಸಾಮಾನ್ಯ ಬೆಳ್ಳುಳ್ಳಿ ಕೆಜಿಗೆ 450 ರಿಂದ 500 ರೂಪಾಯಿಗೆ ಮಾರಾಟವಾಗುತ್ತಿದೆ. ಫಸ್ಟ್‌ ಕ್ವಾಲಿಟಿ ಬೆಳ್ಳುಳ್ಳಿ ಕೆಜಿಗೆ 550 ರಿಂದ 600 ರೂಪಾಯಿವರೆಗೆ ಮಾರಾಟವಾಗುತ್ತಿದೆ.ಹೊರ ರಾಜ್ಯಗಳಿಂದ, ರಾಜ್ಯಕ್ಕೆ ಬರಬೇಕಿದ್ದ ಈರುಳ್ಳಿ, ಬೆಳ್ಳುಳ್ಳಿ ಆಮದು ಆಗದಿರುವುದೇ ದರ ಏರಿಕೆಗೆ ಕಾರಣ ಎಂದು ವ್ಯಾಪಾರಸ್ಥರು ತಿಳಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆ ಹಿನ್ನೆಲೆಯಲ್ಲಿ ಬೆಳೆ ನಾಶವಾಗಿದೆ. ಇದರಿಂದ ಮಾರುಕಟ್ಟೆಗೆ ಈರುಳ್ಳಿ ಮತ್ತು ಬೆಳ್ಳುಳ್ಳಿ ಸರಿಯಾಗಿ ಬಾರದ ಹಿನ್ನೆಲೆಯಲ್ಲಿ ದರ ಹೆಚ್ಚಳವಾಗಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಈರುಳ್ಳಿ ಬೆಲೆ ನೂರರ ಗಡಿ ದಾಟುವ ಸಾಧ್ಯತೆ ಇದೆ.ಬೆಳ್ಳುಳ್ಳಿ 600 ರೂಪಾಯಿ ಆಗಲಿದೆ. ಇತ್ತ ಮಹಾರಾಷ್ಟ್ರದಿಂದ ಜನವರಿ ತಿಂಗಳಿನಲ್ಲಿ ಮಾಲ್ ಬರುತ್ತದೆ ಅಲ್ಲಿಯವರೆಗೆ ದರ ಏರಿಕೆ ಆಗುತ್ತಿರುತ್ತದೆ. ಮಹಾರಾಷ್ಟ್ರದಿಂದ ಈರುಳ್ಳಿ, ಬೆಳ್ಳುಳ್ಳಿ ಬರಲು ಆರಂಭವಾದರೆ, ದರ ಇಳಿಕೆಯಾಗುತ್ತೆ ಎಂದು ತಿಳಿಸಿದ್ದಾರೆ.ಒಟ್ಟಿನಲ್ಲಿ ಈರುಳ್ಳಿ, ಬೆಳ್ಳುಳ್ಳಿ ಇಲ್ಲದ ಅಡುಗೆಯನ್ನು ಕಲ್ಪಿಸಿಕೊಳ್ಳಲು ಮಹಿಳೆಯರಿಗೆ ಸಾಧ್ಯವೆ ಇಲ್ಲ. ಇಂತಹದರಲ್ಲಿ ಅಡುಗೆ ಮನೆಯ ಹಾಟ್ ಫೇವರಿಟ್ ಈರುಳ್ಳಿ, ಬೆಳ್ಳುಳ್ಳಿ ಬೆಲೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿರುವುದು ನಿಜವಾಗಿಯೂ ಗೃಹಿಣಿಯರ ನಿದ್ದೆ ಗೆಡಿಸಿರುವುದಂತು ಸುಳ್ಳಲ್ಲ.

ವರದಿ: C ಕೊಟ್ರೇಶ್ tv8newskannada ಬೆಂಗಳೂರು

Related Articles

Leave a Reply

Your email address will not be published. Required fields are marked *

Back to top button