AUS V IND ಟೆಸ್ಟ್ : ಟ್ರಾವಿಸ್ ಹೆಡ್ ಭರ್ಜರಿ ಬ್ಯಾಟಿಂಗ್ ಟೀಂ ಇಂಡಿಯಾಗೆ ಸೋಲಿನ ನಿರಾಸೆ

ಹೌದು ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. ಆಸ್ಟ್ರೇಲಿಯಾ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಅಡಿಲೇಡ್ ಟೆಸ್ಟ್ ಪಂದ್ಯದ ಮೂರನೇ ದಿನವಾದ ಭಾನುವಾರ ಭಾರತ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 175 ರನ್‌ಗಳಿಗೆ ಆಲೌಟ್ ಆಯಿತು.
ಆಸ್ಟ್ರೇಲಿಯಾ ಗೆಲುವಿಗೆ 19 ರನ್‌ಗಳ ಗುರಿ ಪಡೆಯಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ ವಿಕೆಟ್ ನಷ್ಟವಿಲ್ಲದೆ 22 ರನ್ ಗಳಿಸಿ ಪಂದ್ಯವನ್ನು ಗೆದ್ದಿದೆ.
ಪರ್ತ್‌ನಲ್ಲಿ ನಡೆದ ಮೊದಲ ಪಂದ್ಯವನ್ನು ಭಾರತ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇದೀಗ ಎರಡನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದು ಸರಣಿಯನ್ನು 1-1 ರಲ್ಲಿ ಸಮಬಲ ಮಾಡಿದೆ.
ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳು ಅಬ್ಬರಿಸಲಿಲ್ಲ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಬೃಹತ್ ಮೊತ್ತ ಕಲೆಹಾಕಲು ಸಾಧ್ಯವಾಗಲಿಲ್ಲ.
ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಮೊದಲ ಟಾಸ್ ಗೆದ್ದು ರೋಹಿತ್ ಶರ್ಮಾ ಇನ್ನಿಂಗ್ಸ್ ಆರಂಭಿಸಿದರು. ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 180 ರನ್‌ಗೆ ಆಲೌಟ್ ಆಯಿತು. ಭಾರತದ ಪರ ನಿತೀಶ್‌ಕುಮಾರ್ ರೆಡ್ಡಿ 42 ರನ್‌ಗಳ ಕೊಡುಗೆ ನೀಡಿದರು.
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಆಸೀಸ್ ಪರ ಟ್ರಾವಿಸ್ ಹೆಡ್ (140) ರನ್ ಹೊಡೆಯೋದರ ಮೂಲಕ ಭರ್ಜರಿ ಶತಕ ಸಿಡಿಸಿದರು. ಇದರೊಂದಿಗೆ ಆಸೀಸ್ ಆಲೌಟ್ ಆಗುವ ಮೂಲಕ 337 ರನ್ ಗಳಿಸಿದರು. ಭಾರತ ಪುನಃ ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತ ಆಟವಾಡುವ ನಿರೀಕ್ಷೆಯಿತ್ತು. ಆದರೆ ಭಾರತ ಕೇವಲ 175 ರನ್ ಕಲೆ ಹಾಕುವ ಮೂಲಕ ಆಸ್ಟ್ರೇಲಿಯಾಕ್ಕೆ 19 ರನ್‌ಗಳ ಸುಲಭ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 10 ವಿಕೆಟ್‌ಗಳಿಂದ ಅಡಿಲೇಡ್ ಟೆಸ್ಟ್ ಪಂದ್ಯವನ್ನು ಗೆದ್ದು ಬಿಗಿತು.

ವರದಿ : ಮೊಹಮದ್ ಶಫಿ ಸ್ಪೋರ್ಟ್ಸ್ ಬ್ಯೂರೋ tv8newskannada ಬೆಂಗಳೂರು