ಇತ್ತೀಚಿನ ಸುದ್ದಿ

ಬ್ರೇಕಿಂಗ್ ನ್ಯೂಸ್ : ಕರ್ನಾಟಕ ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಇನ್ನಿಲ್ಲ

ಬೆಂಗಳೂರು ಡಿಸೆಂಬರ್ 10: ಕರ್ನಾಟಕ ಮಾಜಿ ಮುಖ್ಯಮಂತ್ರಿ, ಕೇಂದ್ರದ ವಿದೇಶಾಂಗ ಸಚಿವರು ಆಗಿದ್ದ ಹಿರಿಯ ರಾಜಕಾರಣ ಎಸ್‌.ಎಂ. ಕೃಷ್ಣ ಅವರು ಮಂಗಳವಾರ ಬೆಳಗ್ಗೆ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೆಲವು ಭಾರಿ ಆಸ್ಪತ್ರೆಗೂ ದಾಖಲಾಗಿದ್ದರು.

ಚಿಕಿತ್ಸೆ ಫಲಕಾರಿಯಾಗದೇ ಇಂದು (ಡಿ.10) ನಿಧನರಾದರು. ರಾಜಕಾರಣದಲ್ಲಿ ಸಜ್ಜನ, ಶಾಂತ ಸ್ವಭಾವ ಹಿರಿಯ ರಾಜಕೀಯ ನಾಯಕರೊಬ್ಬರನ್ನು ಕಳೆದುಕೊಂಡಂತಾಗಿದೆ.

ವಯೋಸಹಜ ಕಾಯಿಲೆಯಿಂದ ಮಾಜಿ ಸಿಎಂ ಎಸ್‌ಎಂ ಕೃಷ್ಣ (92) ಅವರು ಬಳಲುತ್ತಿದ್ದರು. ಅವರನ್ನು ಚಿಕಿತ್ಸೆಗಾಗಿ ಕೆಲವು ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಕಾರಿ ಆಗದೇ ಇಂದು ಬೆಳಗಿನ ಜಾವ ಆಸ್ಪ್ರತ್ರೆಯಲ್ಲಿಯೇ ಅವರು ಮೃತಪಟ್ಟಿದ್ದಾರೆ. ಅವರ ಪಾರ್ಥಿವ ಶರೀರವನ್ನು ಹುಟ್ಟೂರಾದ ಮದ್ದೂರಿಗೆ ಕೊಂಡೊಯ್ಯುವ ಸಾಧ್ಯತೆ ಇದೆ.

ಕರ್ನಾಟಕದ 16ನೇ ಮುಖ್ಯಮಂತ್ರಿಯಾಗಿ 1999ರಲ್ಲಿ ಅಧಿಕಾರ ಸ್ವೀಕರಿಸಿದ್ದ ಮಾಜಿ ಮುಖ್ಯಮಂತ್ರಿ ಎಸ್‌ಎಂ.ಕೃಷ್ಣ ಅವರು 2004ರ ತನಕ ಪೂರ್ಣಾವಧಿಗೆ ಸಿಎಂ ಆಗಿ ಸೇವೆ ನೀಡಿದ್ದಾರೆ. ಮುಖ್ಯಮಂತ್ರಿ ಅವಧಿ ಮುಗಿಯುತ್ತಿದ್ದಂತೆ 2008ರವರೆಗೆ ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ 19 ರಾಜ್ಯಪಾಲರಾದರು. ವಿದೇಶಾಂಗ ಸಚಿವರಾಗಿಯು ಕಾರ್ಯ ನಿರ್ವಹಿಸಿದ್ದಾರೆ. ಸ್ಪೀಕರ್ ಆಗಿಯುವ ಸೇವೆ ನೀಡಿದ್ದು, ವಿವಿಧ ಹಂತಗಳಲ್ಲಿ ರಾಜಕೀಯ ಅನುಭವ ಪಡೆದುಕೊಂಡಿದ್ದರು.

ಮಂಡ್ಯದಲ್ಲಿ 1932 ರಂದು ಜನನ: ಮತ್ತು ರಾಜಕೀಯ ಪ್ರವೇಶ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಲ್ಲಯ್ಯ ಕೃಷ್ಣ ದಂಪತಿಗಳ ಮಗನಾಗಿ 1932 ಮೇ 01ರಂದು ಎಸ್‌.ಎಂ.ಕೃಷ್ಣ ಅವರು ಜನಿಸಿದರು. ಸ್ವಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು, ಮೈಸೂರಿನಲ್ಲಿ ಪ್ರೌಢ ಶಿಕ್ಷಣ ಮುಗಿಸಿದರು. ಇದೇ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ಪದವಿ ಪಡೆದರು. ನಂತರ ಕಾನೂನು ಪದವಿ ಪಡೆದು, ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಾಗೆ ತೆರಳಿದರು. ಅಮೆರಿಕಾದಲ್ಲಿ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಅವರು ಪದವಿ ಪಡೆದು ಭಾರತಕ್ಕೆ ಮರಳಿದರು.

ಪಕ್ಷೇತರ ಅಭ್ಯರ್ಥಿಯಾಗಿ ರಾಜಕೀಯ ರಂಗ ಪ್ರವೇಶಿಸಿದ ಅವರು, ಮದ್ದೂರು ವಿಧಾನಸಭಾ ಕ್ಷೇತ್ರ ಪ್ರತಿನಿಧಿಸಿದ್ದರು. ಮೊದಲ ಚುನಾವಣೆಯಲ್ಲಿ ಗೆದ್ದು ಬೀಗಿದರು. ಬಳಿಕ 1967ರಲ್ಲಿ ಅವರು ಚುನಾವಣೆಯಲ್ಲಿ ಸೋಲಬೇಕಾಯಿತು. 1968ರಲ್ಲಿ ಮಂಡ್ಯ ಲೋಕಸಭಾ ಕಣದಲ್ಲಿ ಗೆದ್ದು ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದರು. ನಂತರದ ದಿನಗಳಲ್ಲಿ ಅಂದಿನ ಬಹುದೊಡ್ಡ ಪಕ್ಷ ಕಾಂಗ್ರೆಸ್‌ ಸೇರಿ ರಾಜ್ಯದ ಮುಖ್ಯಮಂತ್ರಿಯು ಆದರು. ದಶಕಗಳ ಕಾಲ ಕಾಂಗ್ರೆಸ್‌ನಲ್ಲಿದ್ದ ಅವರು, ಕಾಲಾನಂತರದಲ್ಲಿ ಈಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು.

ವರದಿ : C ಕೊಟ್ರೇಶ್ tv8newskannada ಬೆಂಗಳೂರು

Related Articles

Leave a Reply

Your email address will not be published. Required fields are marked *

Back to top button