ಅಂಬೇಡ್ಕರ್ ಪರಿನಿಬ್ಬಾಣ ದಿನಕ್ಕೆ ತಡವಾಗಿ ಬಂದಿದ್ದನ್ನು ಪ್ರಶ್ನಿಸಿದಕ್ಕೆ ನನ್ನ ಮೇಲೆ ಹಲ್ಲೆಗೆ ಯತ್ನ: ಚಿಕ್ಕಣ್ಣ

ಚಾಮರಾಜನಗರ, :- ಗುಂಡ್ಲುಪೇಟೆ ತಾಲೂಕು ಸಭಾಂಗಣದಲ್ಲಿ ಡಿ.06 ರಂದು ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿಬ್ಬಾಣ ಕಾರ್ಯಕ್ರಮಕ್ಕೆ ಶಾಸಕ ಗಣೇಶ್ ಪ್ರಸಾದ್ ಅವರು ತಡವಾಗಿ ಆಗಮಿದ್ದರು. ಪ್ರಶ್ನಿಸಿದ ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಪ ಪ್ರಧಾನ ಸಂಚಾಲಕ ಬಲಚವಾಡಿ ಚಿಕ್ಕಣ್ಣ ಆರೋಪಿಸಿದರು.
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುಂಡ್ಲುಪೇಟೆ ತಾಲೂಕು ಸಭಾಂಗಣದಲ್ಲಿ ಅಂಬೇಡ್ಕರ್ ಅವರ ಪರಿನಿಬ್ಬಾಣ ಕಾರ್ಯಕ್ರಮ ಬೆಳಿಗ್ಗೆ 10.30 ಕ್ಕೆ ನಿಗದಿಯಾಗಿದ್ದು, ಶಾಸಕರು 2 ಘಂಟೆ ತಡವಾಗಿ ಬಂದರು ಅದನ್ನು ಪ್ರಶ್ನಿಸಿದ್ದಕ್ಕೆ ನನ್ನ ಮನೆಯ ಕೆಲಸ ಬಿಟ್ಟು ಇಲ್ಲಿ ಬರಬೇಕಾ ನನ್ನ ಇಷ್ಷ ನೀನು ಯಾರು ಕೇಳಲು ಎಂದು ನನ್ನ ಮೇಲೆ ಹಲ್ಲೆ ಮಾಡಲು ಬಂದರು. ಪೊಲೀಸರು ನನ್ನನ್ನು ಹೊರ ಹಾಕಿ ಕಾರ್ಯಕ್ರಮ ಮಾಡಿದ್ದಾರೆ. ದಲಿತ ಜನಾಂಗದವರಿಗೆ ಶಾಸಕ ಗಣೇಶ್ ಪ್ರಸಾದ್ ಅವರು ಕ್ಷಮೆ ಕೇಳಬೇಕು ಎಂದರು.
ಈ ಕುರಿತು ಗುಂಡ್ಲುಪೇಟೆ ಪಟ್ಟಣ ಪೊಲೀಸ್ ಠಾಣೆ ಯಲ್ಲಿ ದೂರು ನೀಡಲಾಗಿದೆ. ಆದರೂ ಪ್ರಕರಣ ದಾಖಲಾಗಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್,ಗ್ರಾಮ ಪಂಚಾಯಿತಿ ಸದಸ್ಯ ರಾಜೇಂದ್ರ, ಮುಖಂಡರಾದ ಬಸವರಾಜು, ಕಬ್ಬಳ್ಳಿ ರೇವಣ್ಣ ಹಾಜರಿದ್ದರು.
ವರದಿ: ಇರಸವಾಡಿ ಸಿದ್ದಪ್ಪಾಜಿ tv8newskannada ಚಾಮರಾಜನಗರ