BIG BREAKING : ಸಚಿವೆ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ, ಎಂಎಲ್ಸಿ ಸಿಟಿ ರವಿ ಬಂಧನ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನ ಪರಿಷತ್ನಲ್ಲಿ ಬಿಜೆಪಿ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಕೆ ಆರೋಪದಡಿ ಎಫ್‌ಐಆರ್ ದಾಖಲಾಗಿದ್ದು, ಇದೀಗ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಲೈಂಗಿಕ ಕಿರುಕುಳ, ಮಹಿಳೆ ಇಚ್ಚೆ ವಿರುದ್ಧ ಅವಮಾನಿಸುವ ಉದ್ದೇಶದಿಂದ ಮಾಡಿದ ಪದಬಳಕೆ ಆರೋಪದಡಿ BNS ಕಾಯ್ದೆ 75 ಮತ್ತು 79ರಡಿ ದೂರು ದಾಖಲಾಗಿದೆ.
ಸಚಿವೆ ಅವರು ನೀಡಿರುವ ದೂರಿನ ಆಧಾರದಡಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಮಹಿಳಾ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಕುರಿತಾಗಿ ಟೀಕಿಸುವು ಅವಮಾನಿಸುವ ಉದ್ದೇಶದಿಂದ ಸನ್ನೆ ಮಾಡಿರುವ ಆರೋಪದಡಿ ಸೆಕ್ಷನ್ 75 ಲೈಂಗಿಕ ಕಿರುಕುಳ, ಸೆಕ್ಷನ್ 79 ಅವಮಾನಿಸುವ ಉದ್ದೇಶದಿಂದ ಅಶ್ಲೀಲ ಸನ್ನೆ ಮಾಡಿರುವ ಆರೋಪದಡಿ ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸುವರ್ಣಸೌಧದಿಂದ ನೇರವಾಗಿ ಪೊಲೀಸರು ರವಿ ಅವರನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.ರವಿ ಅವರ ಮೇಲೆ ಕಾಂಗ್ರೆಸ್ನವರು ಹಲ್ಲೆಗೆ ಯತ್ನಿಸಿದಾಗ ಪೊಲೀಸರು ಏನೂ ಮಾಡಲಿಲ್ಲ ಎಂದು ಬಂಧನ ಕುರಿತಾಗಿ ಬಿಜೆಪಿ ನಾಯಕರು ಕಿಡಿಕಾರುತ್ತಿದ್ದಾರೆ. ಕಾಂಗ್ರೆಸ್ ಅವರ ಗೂಂಡಾಗಿರಿಯನ್ನು ನೋಡಿಯೂ ಪೊಲೀಸರು ಸುಮ್ಮನಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ ಅವರು ಗುಡುಗಿದರು.