Lakshmi Hebbalkar: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್ ನೀಡಿದ ಸಚಿವೆ ಹೆಬ್ಬಾಳ್ಕರ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಶೀಘ್ರವೇ ಗೌರವಧನ ಹೆಚ್ಚಳ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರೊಂದಿಗೆ ಕುಂದು ಕೊರತೆ ಸಭೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವಾಗಲೂ ಅಂಗನವಾಡಿ ಕಾರ್ಯಕರ್ತೆಯರ ಪರ ಇದ್ದೇನೆ.
ಬೇಡಿಕೆಗಳನ್ನು ಈಡೇರಿಸುವ ಕುರಿತು ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸುತ್ತೇನೆ. ಅಷ್ಟೇ ಅಲ್ಲದೇ ಗೌರವಧನ ಹೆಚ್ಚಿಸುವ ಕುರಿತು ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.
ಸಭೆಯಲ್ಲಿ ಗ್ಯಾಚ್ಯುಟಿ ಸೌಲಭ್ಯ, ಗೌರವಧನ ಹೆಚ್ಚಳ, ಮುಂಬಡ್ತಿ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತ ಕಾರ್ಯಕರ್ತೆ, ಸಹಾಯಕಿಯರಿಗೆ ಸ್ವಯಂ ನಿವೃತ್ತಿಯಂತ ಯೋಜನೆ ಕಲ್ಪಿಸುವ ಕುರಿತಂತೆ ಚರ್ಚೆ ನಡೆಸಲಾಯಿತು ಎಂದು ಮಾಹಿತಿ ನೀಡಿದರು.
ಮಂಗಳವಾರದಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.
ವರದಿ: ಮೊಹಮದ್ ಶಫಿ ಸ್ಪೆಶಲ್ ಡೆಸ್ಕ್ tv8kannada ಬೆಂಗಳೂರು