ಇತ್ತೀಚಿನ ಸುದ್ದಿ

ಮಹಿಳಾ ಕೇಂದ್ರಿತ ಗ್ಯಾರಂಟಿ ಅನುಷ್ಠಾನ: ಸಿಎಂ ಸಿದ್ದರಾಮಯ್ಯ ಬಗ್ಗೆ ವಿಶ್ವಸಂಸ್ಥೆ ಅಧ್ಯಕ್ಷ ಶ್ಲಾಘನೆ

ರಾಜ್ಯದಲ್ಲಿ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಸಮಾನತೆಯನ್ನು ಉತ್ತೇಜಿಸಲು ಮಹಿಳಾ ಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಕ್ಕಾಗಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಫಿಲೆಮಾನ್ ಯಾಂಗ್ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶ್ಲಾಘಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ಈ ಯಶಸ್ಸಿನ ಕಥೆಗಳನ್ನು ಮುಂದಿನ ವಿಶ್ವಸಂಸ್ಥೆಯ ಕಾರ್ಯಾಗಾರಗಳಲ್ಲಿ ಹಂಚಿಕೊಳ್ಳಬೇಕೆಂಬ ಬಯಕೆಯನ್ನು ಯಾಂಗ್ ವ್ಯಕ್ತಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಬೆಂಗಳೂರಿಗೆ ಭೇಟಿ ನೀಡಿದ ಫಿಲೆಮನ್ ಯಾಂಗ್ ಅವರನ್ನು ನಗರದ ಖಾಸಗಿ ಹೋಟೆಲ್ ತಾಜ್ ವೆಸ್ಟೆಂಡ್‌ನಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸ್ವಸಹಾಯ ಗುಂಪಿನ ಮಹಿಳೆಯರು ರೇಷ್ಮೆ ಗೂಡುಗಳಿಂದ ತಯಾರಿಸಿದ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಅಲ್ಲದೆ ಒಂದು ಜಗತ್ತು ಹಲವು ಸಾಧ್ಯತೆಗಳನ್ನು ಬಿಂಬಿಸುವ ಕರ್ನಾಟಕ ಕುರಿತಾದ ಪುಸ್ತಕವನ್ನು ನೀಡಿದರು.

“ರಾಜ್ಯದಲ್ಲಿ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಸಮಾನತೆಯನ್ನು ಉತ್ತೇಜಿಸಲು ಮಹಿಳಾ ಪರ ಕಾರ್ಯಕ್ರಮಗಳನ್ನು ಮುನ್ನಡೆಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಶ್ವಸಂಸ್ಥೆಯ ಅಧ್ಯಕ್ಷರು ಅಭಿನಂದಿಸಿದರು ಎಂದು ಮುಖ್ಯಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ.

ಸುಸ್ಥಿರ ಅಭಿವೃದ್ಧಿ ಗುರಿಗಳ(SDG) ಸಾಧನೆಯಲ್ಲಿ ಕರ್ನಾಟಕವು ಉನ್ನತ ಸ್ಥಾನ ಪಡೆಯಲು ಸಾಧ್ಯವಾಗಿರುವ ಬಗ್ಗೆ ವಿಶ್ವಸಂಸ್ಥೆಯ ಅಧ್ಯಕ್ಷರು ಆಸಕ್ತಿಯಿಂದ ಹೆಚ್ಚು ಮಾಹಿತಿ ಹಾಗೂ ವಿವರಗಳನ್ನು ಪಡೆದರು.

ಮಹಿಳೆಯರನ್ನು ಪ್ರಮುಖ ಫಲಾನುಭವಿಗಳಾಗಿ ಕೇಂದ್ರೀಕರಿಸುವ ಐದು ಗ್ಯಾರಂಟಿ ಯೋಜನೆಗಳ ಮೂಲಕ ಲಿಂಗ ಸಮಾನತೆಯನ್ನು ಉತ್ತೇಜಿಸುವಲ್ಲಿ ರಾಜ್ಯ ಸರ್ಕಾರದ ಉಪಕ್ರಮಗಳನ್ನು ಅವರು ಶ್ಲಾಘಿಸಿದರು.

ಪ್ರತಿ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ಮಾಸಿಕ 2,000 ರೂ. ನೆರವು ನೀಡುವ ‘ಗೃಹ ಲಕ್ಷ್ಮಿ’ ಮತ್ತು ಸಾರ್ವಜನಿಕ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆ, ಕಾರ್ಮಿಕ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ದರವನ್ನು ಸುಧಾರಿಸಲು ಕೈಗೊಂಡಿರುವ ಕ್ರಮಗಳು, ಹಸಿವು ಮತ್ತು ಅಪೌಷ್ಟಿಕತೆಯನ್ನು ತಡೆಗಟ್ಟಲು ತಲಾವಾರು ಪೋಷಕಾಂಶ ನೀಡಿಕೆ, ಕೌಶಲ್ಯದ ಮೂಲಕ ಉದ್ಯೋಗ ಗಳಿಕೆ, ಅಡುಗೆ ಅನಿಲ ಪೂರೈಕೆ, ಉಚಿತ ವಿದ್ಯುತ್ ಪೂರೈಕೆ ಕುರಿತ ಕಾರ್ಯಕ್ರಮಗಳ ವಿವರಗಳನ್ನು ಮುಖ್ಯ ಕಾರ್ಯದರ್ಶಿಗಳು ನೀಡಿದರು.

Related Articles

Leave a Reply

Your email address will not be published. Required fields are marked *

Back to top button