ಇತ್ತೀಚಿನ ಸುದ್ದಿ

ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಬೀಳ್ಕೊಡುಗೆ 18ನೇ ವರ್ಷದ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮ.

ಮಸ್ಕಿ : ಪಟ್ಟಣದ ವಿದ್ಯಾನಿಕೇತನ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ 18ನೇ ವರ್ಷದ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮ ನೆಡೆಯಿತು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ ಪರಮಪೂಜ್ಯ ಶ್ರೀ ಮಹಾಂತ ಸ್ವಾಮಿಗಳು ಕಲ್ಯಾಣಾಶ್ರಮ ತಿಮ್ಮಾಪುರ ಇವರು ಮಾತನಾಡಿ ,ವಿದ್ಯಾರ್ಥಿಗಳಾದವರು ಇಂದು ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳನ್ನು ಕೂಡ ಅಳವಡಿಸಿಕೊಳ್ಳಬೇಕು. ಮಾತೃದೇವೋಭವ, ಪಿತೃದೇವೋಭವ, ಆಚಾರ್ಯ ದೇವೋ ಭವ ಮತ್ತು ಅತಿಥಿ ದೇವೋಭವ ಎನ್ನುವ ನಾಲ್ಕು ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಜೀವನ ಸಾರ್ಥಕ. ಪ್ರತಿಯೊಬ್ಬ ಮನುಷ್ಯನ ಹುಟ್ಟು ಸಾವುಗಳ ಮಧ್ಯೆ ಏನನ್ನಾದರೂ ಸಾಧಿಸಬೇಕೆಂಬ ಛಲ ನಮ್ಮಲ್ಲಿ ಮೂಡಿದಾಗ ಮಾತ್ರ ಪರಮಾತ್ಮನು ನೀಡಿದ ಈ ಜೀವಕ್ಕೆ ಸಾರ್ಥಕ ಭಾವನೆ ಮೂಡುತ್ತದೆ. ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಹೆಚ್ಚು ಗಮನವನ್ನು ಹರಿಸುವುದರ ಜೊತೆಗೆ ಗುರುಗಳ ಮಾರ್ಗದರ್ಶನದಲ್ಲಿ ನಡೆಯಿರಿ, ಅಂದಾಗ ಮಾತ್ರ ನಿಮ್ಮ ಕನಸು ನನಸಾಗುವುದು ಶತಸಿದ್ಧ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು.

ಅದೇ ರೀತಿ ಜಿ. ಬಿ ಶೆಟ್ಟಿ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಮಲ್ಲಯ್ಯ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ. ವಾರ್ಷಿಕ ಪರೀಕ್ಷೆ ಹತ್ತಿರ ಇರುವ ಕಾರಣ ಎಲ್ಲರೂ ಸರಿಯಾದ ಅಭ್ಯಾಸವನ್ನ ಮಾಡಿ ಎಂದು ಶುಭ ಹಾರೈಸಿದರು.

ಈ ವೇಳೆ, ಕಾಲೇಜಿನ ಪ್ರಾಚಾರ್ಯರಾದ ವಿನಯಕುಮಾರ ಹಿರೇಮಠ, ಉಪನ್ಯಾಸಕರಾದ ಸುರೇಶ್ ಬಳಗನೂರು, ವಿದ್ಯಾ ಮನೋಹರ, ಅಮರೇಶ ನಾಯಕ, ಆದಪ್ಪ ನಾಯಕ, ಮಹೇಶ್ ಮಸ್ಕಿ, ಗಂಗಮ್ಮ, ಕುಮಾರಿ ಲಕ್ಷ್ಮಿ,
ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ : ಸಿದ್ದಯ್ಯ ಸ್ವಾಮಿ ಹೆಸರೂರೂ tv8kannada ಮಸ್ಕಿ

Related Articles

Leave a Reply

Your email address will not be published. Required fields are marked *

Back to top button